ಕರ್ನಾಟಕದ ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಗುರುವಾರ ಬೆಳಗ್ಗೆ 9 ಗಂಟೆಗೆ ಅಧಿಕಾರ ಸ್ವೀಕರಿಸಿದ್ದಾರೆ. ರಾಜ್ಯಪಾಲ ವಜೂಬಾಯಿ ವಾಲಾ ಅವರು ಅಧಿಕಾರ, ಗೌಪ್ಯತೆಯ ಪ್ರಮಾಣ ಬೋಧಿಸಿದರು. ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಅವರು ಪ್ರಮಾಣವಚನ ಸ್ವೀಕರಿಸಿದರು.
ಈ ಸಂದರ್ಭ ದೇವರ ಮತ್ತು ರೈತರ ಹೆಸರಲ್ಲಿ ಪ್ರಮಾಣವಚನವನ್ನು ಬಿ.ಎಸ್.ಯಡಿಯೂರಪ್ಪ ಸ್ವೀಕರಿಸಿದರು. ಹೆಗಲಲ್ಲಿ ಹಸಿರು ಶಾಲು ಹೊದ್ದುಕೊಂಡು ಆಗಮಿಸಿದ ಯಡಿಯೂರಪ್ಪ ಅವರನ್ನು ರಾಜಭವನದಲ್ಲಿ ಸೇರಿದ್ದ ಹಲವಾರು ಕಾರ್ಯಕರ್ತರು ಜಯಘೋಷದೊಂದಿಗೆ ಸ್ವಾಗತಿಸಿದರು.
ಈ ಸಂದರ್ಭ ಪ್ರಧಾನಮಂತ್ರಿ ನರೇಂದ್ರಮೋದಿ ಅವರ ಪರವಾಗಿಯೂ ಜಯಘೋಷ ಮೊಳಗಿತು. ಕೇವಲ ಐದು ನಿಮಿಷಗಳಲ್ಲಿ ಕಾರ್ಯಕ್ರಮ ಮುಗಿಯಿತು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to comment on "ದೇವರ, ರೈತರ ಹೆಸರಲ್ಲಿ ಪ್ರತಿಜ್ಞೆ ಸ್ವೀಕರಿಸಿದ ಯಡಿಯೂರಪ್ಪ"