ಫರಂಗಿಪೇಟೆ ಕುಲಾಲ ಸುಧಾರಕ ಸಂಘದ ರಜತ ಸಂಭ್ರಮವು ಮೇ 19 ಮತ್ತು 20 ರಂದು ನಡೆಯಲಿದೆ. ಮೇ 19ರಂದು ಬೆಳಿಗ್ಗೆ ಸತ್ಯನಾರಾಯಣ ಪೂಜೆ, ಪ್ರಸಾದ ವಿತರಣೆ ನಂತರ ವಾರ್ಷಿಕ ಮಹಾಸಭೆ ನಡೆಯಲಿದೆ. ಸಂಜೆ ಕಲ್ಲಡ್ಕ ವಿಠಲ ನಾಯಕ್ ಮತ್ತು ಬಳಗದವರಿಂದ ಗೀತಾ-ಸಾಹಿತ್ಯ-ಸಂಭ್ರಮ ಎಂಬ ವಿನೂತನ ಶೈಲಿಯ ಕಾರ್ಯಕ್ರಮ ನಡೆಯಲಿದೆ.
ಮೇ 20ರಂದು ಸಂಜೆ ಸಭಾ ಕಾರ್ಯಕ್ರಮದಲ್ಲಿ ಮಾಣಿಲ ಕ್ಷೇತ್ರದ ಮೊಹನದಾಸ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ನಡುಬೊಟ್ಟು ಉದ್ಭವ ರೌದ್ರನಾಥೇಶ್ವರ ದೇವಸ್ಥಾನದ ಧರ್ಮದರ್ಶಿ ರವಿ ಎನ್., ರಜತ ಸಿಂಧೂರ ಸ್ಮರಣ ಸಂಚಿಕೆಯನ್ನು ಬಿಡುಗಡೆಗೊಳಿಸಲಿದ್ದಾರೆ. ಮಾತೃ ಸಂಘದ ಅಧ್ಯಕ್ಷ ಸುಜೀರು ಕುಡುಪು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಯುವ ಉದ್ಯಮಿ ಅನಿಲ್‌ದಾಸ್, ದ.ಕ.ಜಿ.ಪಂ. ಉಪಾಧ್ಯಕ್ಷ ಕಸ್ತೂರಿ ಪಂಜ, ಕುಲಶೇಖರ ವೀರನಾರಾಯಣ ಸೇವಾ ಟ್ರಸ್ಟ್‌ನ ಅಧ್ಯಕ್ಷ ಬಿ. ಪ್ರೇಮಾನಂದ ಕುಲಾಲ್, ಸಮಾಜ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಸುರೇಶ್ ಕುಲಾಲ್, ಬಂಟ್ವಾಳ ಕುಲಾಲ ಸುಧಾರಕ ಸಂಘದ ಅಧ್ಯಕ್ಷ ಡಿ. ಎಂ. ಕುಲಾಲ್ ಭಾಗವಹಿಸಲಿದ್ದಾರೆ.
ಕೃಷಿಕ ಪೂವಪ್ಪ ಬಂಗೇರ, ನಾಟಕ ಮತ್ತು ತುಳು ಸಿನಿಮಾ ನಟ ಪಾಂಡುರಂಗ ಕುಲಾಲ್‌ರವರನ್ನು ಸನ್ಮಾನಿಸಲಿದ್ದಾರೆ. ಪುದು ಗ್ರಾಮ ಪಂಚಾಯತ್ ಸದಸ್ಯ ನಾಗವೇಣಿ ಹರಿಶ್ಚಂದ್ರ ಕುಲಾಲ್‌ರವರನ್ನು ಅಭಿನಂದಿಸಲಿದ್ದಾರೆ.
2017ರಲ್ಲಿ ಎಸ್.ಎಸ್.ಎಲ್.ಸಿ.ಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಾದ ಕು. ಶ್ರೇಯಾ ಅಡ್ಯಾರ್, ಕು. ಯಕ್ಷಿತಾ ಪೊನ್ನೋಡಿ, ಕು. ಪ್ರತಿಭ ದೇವಸ್ಯ ಮಾರಿಪಳ್ಳ, ಕು. ಧನ್ಯಶ್ರೀ ರೊಟ್ಟಿಗುಡ್ಡೆ ಪುದುರವರಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಲಿದೆ. ರಾತ್ರಿ ನಮ್ಮ ಕಲಾವಿದೆರ್ ನೆಲ್ಯಾಡಿ ಇವರಿಂದ ಪನ್ಪಿನಕ್ಲು ಪನ್ಪೆರ್ ಎಂಬ ನಾಟಕ ಕಾರ್ಯಕ್ರಮ ನಡೆಯಲಿದೆ.