ಟಿಪ್ಪರ್ ಲಾರಿವೊಂದು ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟು, ಸಹ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬ್ರಹ್ಮರಕೂಟ್ಲು ಟೋಲ್ ಗೇಟ್ ಬಳಿ ಶನಿವಾರ ರಾತ್ರಿ ಅಪಘಾತ ಸಂಭವಿಸಿದೆ.
ಇಲ್ಲಿನ ಪರ್ಲಿಯಾ ನಿವಾಸಿ ಇಕ್ಬಾಲ್ (38) ಮೃತ ಬೈಕ್ ಸವಾರ. ಬಶೀರ್ (30) ಗಾಯಗೊಂಡವರು.
ಇಬ್ಬರೂ ಬೈಕ್ ನಲ್ಲಿ ಮಂಗಳೂರು ಕಡೆ ಹೋಗುತ್ತಿದ್ದಾಗ ಹಿಂದಿನಿಂದ ಬಂದ ಟಿಪ್ಪರ್ ಲಾರಿ ಬ್ರಹ್ಮಕೂಟ್ಲು ಟೋಲ್ ಬಳಿ ಬೈಕ್ ಗೆ ಢಿಕ್ಕಿ ಹೊಡೆದಿದೆ. ಬೈಕ್ ಸವಾರಿಬ್ಬರು ರಸ್ತೆಗೆ ಎಸೆಯಲ್ಪಟ್ಟು ಇಕ್ಬಾಲ್ ಎಂಬವರ ಮೇಲೆ ಲಾರಿ ಹರಿದು ಈ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಪೊಲಿಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…