www.bantwalnews.com – ಸಂಪಾದಕ: ಹರೀಶ ಮಾಂಬಾಡಿ
ಬಂಟ್ವಾಳದ ನೂತನ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಸರಪಾಡಿಗೆ ಭೇಟಿ ನೀಡಿದರು. ಈ ಸಂದರ್ಭ ಮಾತನಾಡಿದ ಅವರು, ಬಂಟ್ವಾಳವನ್ನು ಮಾದರಿ ಕ್ಷೇತ್ರವನ್ನಾಗಿಸಲು ಪಣ ತೊಡುವುದಾಗಿ ತಿಳಿಸಿದರು.
ಅಭಿವೃದ್ದಿ ಮರಿಚಿಕೆಯಾಗಿದ್ದ ಸರಪಾಡಿ,ಮಣಿನಾಲ್ಕೂರು ಪ್ರದೇಶಕ್ಕೆ ಮುಂದಿನ ದಿನಗಳಲ್ಲಿ ಪ್ರಥಮ ಆದ್ಯತೆ ನೀಡುತ್ತೆನೆಂದು ಹೇಳಿದರು.
ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ ಮಾತಾಡಿ ಅಭಿವೃದ್ದಿ ಪರ ಚಿಂತನೆಯುಳ್ಳ ರಾಜೇಶ್ ನಾಯ್ಕ್ಅವರಿಂದ ಬಂಟ್ವಾಳ ಕ್ಷೇತ್ರದ ಮಾದರಿ ಕ್ಷೇತ್ರವಾಗಳಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಬಂಟ್ವಾಳ ಕ್ಷೇತ್ರದ ಅಧ್ಯಕ್ಷರಾದ ದೇವದಾಸ್ ಶೆಟ್ಟಿ ಮಾತಾಡಿ ಬಂಟ್ವಾಳ ಕ್ಷೇತ್ರದ ಪ್ರತಿ ಕಾರ್ಯಕರ್ತರಲ್ಲಿ ನಿರಂತರ ೫ ವರ್ಷಗಳಿಂದ ಸಂಪರ್ಕದಲ್ಲಿದ್ದು ಜನರ ಕಷ್ಟ-ಸುಖಗಳಿಗೆ ಸ್ಪಂದಿಸಿ ಹಾಗೂ ಕಾರ್ಯಕರ್ತರ ಪರಿಶ್ರಮದಿಂದ ಪಡೆದ ಗೆಲುವು ಎಂದು ಬಣ್ಣಿಸಿದರು.
ಬಂಟ್ವಾಳ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ, ಕ್ಷೇತ್ರ ಉಪಾಧ್ಯಕ್ಷರಾದ ನಾರಾಯಣ ಪೂಜಾರಿ ಬೊಳ್ಳುಕಲ್ಲು, ಕ್ಷೇತ್ರ ಕಾರ್ಯದರ್ಶಿ ರಂಜಿತ್ ಮೈರ, ಸರಪಾಡಿ ಮಹಾಶಕ್ತಿಕೇಂದ್ರದ ಅಧ್ಯಕ್ಷ ಶಶಿಕಾಂತ್ ಶೆಟ್ಟಿ, ಸರಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಲೀಲಾವತಿ, ಧರ್ಣಪ್ಪ ಪೂಜಾರಿ, ಉಪಾಧ್ಯಕ್ಷರಾದ ದಯಾನಂದ ಶೆಟ್ಟಿ ಮುನ್ನಲಾಯಿ, ಮಣಿನಾಲ್ಕೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ದಿನೇಶ್ ನಾಯ್ಕ, ಉಪಸ್ಥಿತರಿದ್ದರು. ಗ್ರಾಮಪಂಚಾಯತ್ ಸದಸ್ಯರಾದ ದಯಾನಂದ ಶೆಟ್ಟಿ ಕಾರ್ಯಕ್ರಮವನ್ನು ನಿರೂಪಿಸಿರು. ಜಿಲ್ಲಾ ಯುವಮೋರ್ಚಾ ಕಾರ್ಯದರ್ಶಿ ಸುದರ್ಶನ್ ಬಜ ವಂದಿಸಿದರು.
ವಾಮದಪದವಿನಲ್ಲಿ ಅಭಿನಂದನೆ:
ನೂತನ ಶಾಸಕ ರಾಜೇಶ್ ನಾಯ್ಕ್ ಅವರಿಗೆ ಗಣೇಶ ಮಂದಿರ ವಾಮದಪದವುನಲ್ಲಿ ಅಭಿನಂದನಾ ಕಾರ್ಯಕ್ರಮವು ನಡೆಯಿತು. ಬಂಟ್ವಾಳ ಕ್ಷೇತ್ರದ ಅಧ್ಯಕ್ಷರಾದ ದೇವದಾಸ್ ಶೆಟ್ಟಿಯವರು ಮಾತಾಡಿ ಬಂಟ್ವಾಳ ಕ್ಷೇತ್ರದ ಪ್ರತಿ ಕಾರ್ಯಕರ್ತರಲ್ಲಿ ನಿರಂತರ ೫ ವರ್ಷಗಳಿಂದ ಸಂಪರ್ಕದಲ್ಲಿದ್ದು ಜನರ ಕಷ್ಟ-ಸುಖಗಳಿಗೆ ಸ್ಪಂದಿಸಿ ಹಾಗೂ ಕಾರ್ಯಕರ್ತರ ಪರಿಶ್ರಮದಿಂದ ಪಡೆದ ಗೆಲುವು ಎಂದು ಬಣ್ಣಿಸಿದರು. ರಾಜ್ಯ ಸಹವಕ್ತಾರೆ ಸುಲೋಚನ ಜಿ ಕೆ ಭಟ್, ಬಂಟ್ವಾಳ ಬಿಜೆಪಿ ಪ್ರಧಾನಕಾರ್ಯದರ್ಶಿ ರಾಮದಾಸ್ ಬಂಟ್ವಾಳ, ಸಂಗಬೆಟ್ಟು ಮಹಾಶಕ್ತಿಕೇಂದ್ರದ ಅಧ್ಯಕ್ಷರಾದ ರತ್ನಕುಮಾರ್ ಚೌಟ, ವಸಂತ ಕುಮಾರ್ ಅಣ್ಣಳಿಕೆ, ಸಂತೋಷ್ ರಾಯಿಬೆಟ್ಟು, ಹರೀಶ್ ಆಚಾರ್ಯ, ಪುರುಷೋತ್ತಮ ಶೆಟ್ಟಿ ವಾಮದಪದವು, ಚಂದ್ರಶೇಖರ ಶೆಟ್ಟಿ ಕುಮಂಗಿಲ, ಶಂಕರ ಶೆಟ್ಟಿ ಬೆದ್ರಮಾರ್, ಲಕ್ಷ್ಮೀನಾರಾಯಣ ಉಡುಪ, ಚಂದ್ರಶೇಖರ ಶೆಟ್ಟಿ ವಾಮದಪದವು, ದಿನೇಶ್ ಶೆಟ್ಟಿ ದಂಬೆದಾರ್, ಶ್ಯಾಮ್ ಪ್ರಸಾದ್ ಪೂಂಜ, ಗಂಗಾಧರ್ ಪೂಜಾರಿ ಮುಗೇರ, ಪ್ರಕಾಶ್ ಶೆಟ್ಟಿ, ಕರುಣಾಕರ, ಮೋಹನದಾಸ್ ಗಟ್ಟಿ, ವಿನೋದ್ ಪೂಜಾರಿ, ರಘುವೀರ್ ಭಟ್, ರೂಪೇಶ್ ಪೂಜಾರಿ, ಆಶಾ ಜಯರಾಮ ಶೆಟ್ಟಿ, ವಿನುತ, ಉಪಸ್ಥಿತರಿದ್ದರು.
ಸರಪಾಡಿ ದೇವಸ್ಥಾನದಲ್ಲಿ ವಿಶೇಷ ಪೂಜೆ:
ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ನೂತನ ಶಾಸಕರಾಗಿ ಆಯ್ಕೆಯಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಸರಪಾಡಿ ಶರಬೇಶ್ವರ ದೇವಸ್ಥಾನಕ್ಕೆ ಭೇಟಿ ಮಾಡಿ ವಿಶೇಷ ಪೂಜೆಯನ್ನು ಸಲ್ಲಿಸಿದ್ದರು. ಈ ಸಂಧರ್ಭದಲ್ಲಿ ಬಂಟ್ವಾಳ ಬಿಜೆಪಿ ಪ್ರಧಾನಕಾರ್ಯದರ್ಶಿ ರಾಮದಾಸ್ ಬಂಟ್ವಾಳ, ಕ್ಷೇತ್ರ ಉಪಾಧ್ಯಕ್ಷರಾದ ನಾರಾಯಣ ಪೂಜಾರಿ ಬೊಳ್ಳುಕಲ್ಲು, ಕ್ಷೇತ್ರ ಕಾರ್ಯದರ್ಶಿ ರಂಜಿತ್ ಮೈರ, ಸರಪಾಡಿ ಮಹಾಶಕ್ತಿಕೇಂದ್ರದ ಅಧ್ಯಕ್ಷ ಶಶಿಕಾಂತ್ ಶೆಟ್ಟಿ, ಸರಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಲೀಲಾವತಿ, ಧರ್ಣಪ್ಪ ಪೂಜಾರಿ, ಉಪಾಧ್ಯಕ್ಷರಾದ ದಯಾನಂದ ಶೆಟ್ಟಿ ಮುನ್ನಲಾಯಿ, ಮಣಿನಾಲ್ಕೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ದಿನೇಶ್ ನಾಯ್ಕ, ಉಪಸ್ಥಿತರಿದ್ದರು. ಗ್ರಾಮಪಂಚಾಯತ್ ಸದಸ್ಯರಾದ ದಯಾನಂದ ಶೆಟ್ಟಿ ಕಾರ್ಯಕ್ರಮವನ್ನು ನಿರೂಪಿಸಿರು. ಜಿಲ್ಲಾ ಯುವಮೋರ್ಚಾ ಕಾರ್ಯದರ್ಶಿ ಸುದರ್ಶನ್ ಬಜ ವಂದಿಸಿದರು.