ಶಾಸಕರಾಗಿ ಆಯ್ಕೆಯಾದ ಬಳಿಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಬಿ.ಸಿ.ರೋಡಿನ ಮಿನಿ ವಿಧಾನಸೌಧದಲ್ಲಿರುವ ಬಂಟ್ವಾಳ ತಾಲೂಕು ಕಚೇರಿಗೆ ಗುರುವಾರ ಭೇಟಿ ನೀಡಿದ ತಹಶೀಲ್ದಾರ್ ವೈ.ರವಿ ಅವರೊಂದಿಗೆ ಮಾತುಕತೆ ನಡೆಸಿದರು.
ಈ ಸಂದರ್ಭ ಸರಕಾರದ ಸವಲತ್ತುಗಳ ಕುರಿತು ತಹಶೀಲ್ದಾರ್ ಮಾಹಿತಿ ನೀಡಿದರು. ಫಲಾನುಭವಿಗಳಿಗೆ ಸವಲತ್ತುಗಳು ವಿಳಂಬವಾಗಿ ಸಿಗದಂತೆ ನೋಡಿಕೊಳ್ಳಬೇಕು. ಯಾವುದೇ ಇಲಾಖಾ ಸವಲತ್ತುಗಳನ್ನು ತಾರತಮ್ಯವಿಲ್ಲದೆ ಒದಗಿಸಬೇಕು ಎಂದು ಈ ಸಂದರ್ಭ ಶಾಸಕರು ಸೂಚನೆ ನೀಡಿದರು.
ಬಿಜೆಪಿ ಬಂಟ್ವಾಳ ಕ್ಷೇತ್ರಾಧ್ಯಕ್ಷ ಬಿ.ದೇವದಾಸ ಶೆಟ್ಟಿ, ಪುರಸಭಾ ಸದಸ್ಯ ಎ.ಗೋವಿಂದ ಪ್ರಭು, ಪ್ರಮುಖರಾದ ಪ್ರಭಾಕರ ಪ್ರಭು, ರಮೇಶ್ ಕುಡ್ಮೇರು, ಹರೀಶ್ ರಾಯಿ, ರಮಾನಾಥ ರಾಯಿ, ಖಲೀಲ್, ನಂದಕುಮಾರ್ ರೈ, ಗಣೇಶ್ ರೈ ಮಾಣಿ, ಸೀತಾರಾಮ ರೈ, ರಾಮಕೃಷ್ಣ ಮಯ್ಯ ಮೊದಲಾದವರು ಉಪಸ್ಥಿತರಿದ್ದರು.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ತಾಲೂಕು ಕಚೇರಿಗೆ ಶಾಸಕ ರಾಜೇಶ್ ನಾಯ್ಕ್ ಭೇಟಿ, ತಹಶೀಲ್ದಾರ್ ಗೆ ಸೂಚನೆ"