ಎರಡು ದ್ವಿಚಕ್ರ ವಾಹನಗಳಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನಗಳ ಸವಾರರಿಬ್ಬರು ಗಾಯಗೊಂಡಿದ್ದಾರೆ. ಫರಂಗಿಪೇಟೆ ಪೆಟ್ರೋಲ್ ಪಂಪ್ ಸಮೀಪ ಸೋಮವಾರ ಬೆಳಗ್ಗೆ ಘಟನೆ ಸಂಭವಿಸಿದೆ.
ವಾಮಂಜೂರಿನ ನಿವಾಸಿ ತಿಲಕ್ ಹಾಗೂ ಸಾಲೆತ್ತೂರಿನ ನಿವಾಸಿ ಉಮರ್ ಫಾರೂಕ್ ಗಾಯಗೊಂಡವರು. ಇವರಿಬ್ಬರು ಬೇರೆ ಬೇರೆ ದ್ವಿಚಕ್ರ ವಾಹನದಲ್ಲಿ ಮಂಗಳೂರು ಕಡೆಗೆ ತೆರಳುತ್ತಿದ್ದಾಗ ನಿಯಂತ್ರಣ ತಪ್ಪಿದ ಕಾರು ಫರಂಗಿಪೇಟೆ ಸಮೀಪದ ಪೆಟ್ರೋಲ್ ಬಂಕ್ ಬಳಿ ಎರಡು ದ್ವಿಚಕ್ರ ವಾಹನಗಳಿಗೆ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಪರಿಣಾಮ ಸವಾರಿಬ್ಬರು ರಸ್ತೆಗೆಸೆಯಲ್ಪಟ್ಟಿದ್ದು, ಈ ಪೈಕಿ ತಿಲಕ್ ಅವರ ಕಾಲಿಗೆ ಗಾಯಗಳಾಗಿದ್ದು, ಉಮರ್ ಫಾರೂಕ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿ ತುಂಬೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮಕೈಗೊಂಡಿದ್ದಾರೆ.