ಮೋಡಕ್ಕೆ ಅಂಜದೆ ದಡ್ಡಲಕಾಡಿನಲ್ಲಿ ನಡೆಯಿತು ಸಂಭ್ರಮದ ಶಾಲಾ ಪ್ರಾರಂಭೋತ್ಸವ

www.bantwalnews.com – ಸಂಪಾದಕ: ಹರೀಶ ಮಾಂಬಾಡಿ

ಜಾಹೀರಾತು

ಬೆಳಗ್ಗೆ ಮೋಡ ಕವಿದಿದ್ದರೂ ಮಕ್ಕಳು, ಪೋಷಕರು, ಊರವರು ಸೇರಿ ಹಬ್ಬದ ವಾತಾವರಣ ಮೂಡಿಸಿದ ಮೆರವಣಿಗೆ, ಹಸಿರು ಹೊರೆಕಾಣಿಕೆ, ಮೆರವಣಿಗೆಯಲ್ಲಿ ಬಂದ ಮಕ್ಕಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿಯಿಂದಲೇ ಸಿಹಿ ತಿನಿಸು, ತುಳುನಾಡ ಸಾಂಪ್ರದಾಯಿಕ ದಿರಿಸಿನಲ್ಲಿ ಮಕ್ಕಳ ಖುಷಿ.

ಇದು ಬಂಟ್ವಾಳ ತಾಲೂಕಿನ ದಡ್ಡಲಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ನಡೆದ ತಾಲೂಕು ಮಟ್ಟದ ಶಾಲಾ ಆರಂಭೋತ್ಸವದ ಸಂಭ್ರಮ.

ಜಾಹೀರಾತು

ದಡ್ಡಲಕಾಡು ಶಾಲೆ ವಿದ್ಯಾರ್ಥಿಗಳು ಮೆರವಣಿಗೆಯಲ್ಲಿ ಸಾಗಿ ಬಂದು ಶಾಲಾ ಪ್ರಾರಂಭೊತ್ಸವವನ್ನು ಸಂಭ್ರಮಿಸಿದರು. Pic: ದೀಪಕ್ ಸಾಲ್ಯಾನ್, ಬಂಟ್ವಾಳ

ಕರೆಂಕಿ ಶ್ರೀ ದುರ್ಗಾಪರಮೇಶ್ವರೀ ದೇವಿ ದೇವಸ್ಥಾನದಿಂದ ಶಾಲೆಯವರೆಗೆ ವೈಭವದ ಮೆರವಣಿಗೆ ನಡೆಯಿತು. ದೇವಿ ಸಾನಿಧ್ಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಬಳಿಕ ಎಸ್‌ಡಿಎಂಸಿ ಅಧ್ಯಕ್ಷ ರಾಮಚಂದ್ರ ಕರೆಂಕಿ ಅವರು ಕಲಶವನ್ನು ವಿದ್ಯಾರ್ಥಿಗೆ ಹಸ್ತಾಂತರಿಸಿದರು. ಈ ಮೂಲಕ ಮೆರವಣಿಗೆಗೆ ಚಾಲನೆ ದೊರಕಿತು. ಶಾಲಾ ವಿದ್ಯಾರ್ಥಿಗಳು ಸೇರಿದಂತೆ ವಿದ್ಯಾರ್ಥಿಗಳ ಪೋಷಕರು, ದುರ್ಗಾ ಫ್ರೆಂಡ್ಸ್ ಕ್ಲಬ್ ಸದಸ್ಯರು, ಶಿಕ್ಷಕರು ಹಾಗೂ ಎಸ್‌ಡಿಎಂಸಿ ಸದಸ್ಯರು ಮೆರವಣಿಗೆಯಲ್ಲಿ ಪಾಲ್ಗೊಂಡರು. ಈ ಸಂದರ್ಭ ಶಿಕ್ಷಣದ ಮಹತ್ವ ಸಾರುವ ಫಲಕಗಳನ್ನು ವಿದ್ಯಾರ್ಥಿಗಳು ಹೊತ್ತರು.

ಶಾಲೆಗೆ ಬಂದ ವಿದ್ಯಾರ್ಥಿಗಳು ಕ್ಷೇತ್ರ ಶಿಕ್ಷಣಾಧಿಕಾರಿಗೆ ಹಸಿರು ಹೊರಕಾಣಿಕೆ ಸಮರ್ಪಿಸಿದರು. ಮೆರವಣಿಗೆಯಲ್ಲಿ ಸಾಗಿ ಬಂದ ವಿದ್ಯಾರ್ಥಿಗಳಿಗೆ ಸಿಹಿ ತಿನಿಸು ಕೊಟ್ಟು ಶಿಕ್ಷಣಾಧಿಕಾರಿ ಶಿವಪ್ರಕಾಶ್ ಶಾಲೆಗೆ ಸ್ವಾಗತಿಸಿದರು. ಬಳಿಕ ಎಲ್ಲಾ ವಿದ್ಯಾರ್ಥಿಗಳಿಗೂ ಸಿಹಿ ಹಾಗೂ ಕಷಾಯ ನೀಡಲಾಯಿತು. ಸಭಾ ಕಾರ್ಯಕ್ರಮದ ಬಳಿಕ ಎಲ್ಲರೂ ಪಾಯಸದೂಟ ಸವಿದರು.

ಸಭಾ ಕಾರ್ಯಕ್ರಮ:

ಜಾಹೀರಾತು

ಶಾಲೆಯನ್ನು ದತ್ತು ಸ್ವೀಕರಿಸಿದ ದುರ್ಗಾ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಪ್ರಕಾಶ್ ಅಂಚನ್ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ಅವರು ಮಾತನಾಡಿ ಶಾಲೆ ಎನ್ನುವುದು ಸರ್ವಧರ್ಮದ ದೇಗುಲ. ಶಾಲೆ ಅಭಿವೃದ್ದಿ ಆಗಬೇಕಾದರೆ ಊರಿನ ಜನರ ಸಹಕಾರ ಅಗತ್ಯ ಎಂದರು. ಕ್ಷೇತ್ರ ಶಿಕ್ಷಾಣಾಧಿಕಾರಿ ಶಿವಪ್ರಕಾಶ್ ಮಾತನಾಡಿ ದಡ್ಡಲಕಾಡು ಶಾಲೆಯಲ್ಲಿ ಆದ ಪ್ರಯೋಗದ ಬಳಿಕ ತಾಲೂಕಿನ ಅನೇಕ ಸರಕಾರಿ ಶಾಲೆಗಳು ವರ್ಷದಿಂದ ವರ್ಷಕ್ಕೆ ಅಭಿವೃದ್ದಿಯಾಗುತ್ತಿದೆ ಎಂದರು. ದಡ್ಡಲಕಾಡು ಶಾಲೆಗೆ ದೈಹಿಕ ಶಿಕ್ಷಕರ ಹುದ್ದೆಯನ್ನು ಮಂಜೂರುಗೊಳಿಸಲಾಗಿದ್ದು ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚುತ್ತಿದ್ದಂತೆಯೇ ಶಿಕ್ಷಕರನ್ನು ಸರಕಾರ ಒದಗಿಸುತ್ತದೆ ಎಂದರು.

ಜಿ.ಪಂ.ಸದಸ್ಯ ತುಂಗಪ್ಪ ಬಂಗೇರ, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ರಾಮಚಂದ್ರ ಕರೆಂಕಿ, ಉಪಾಧ್ಯಕ್ಷೆ ಚಿತ್ರಾಕ್ಷಿ, ಪಂಜಿಕಲ್ಲು ಗ್ರಾ.ಪಂ. ಅದ್ಯಕ್ಷೆ ಸುಮಿತ್ರಾ ಯೋಗೀಶ್ ಕುಲಾಲ್, ಶ್ರೀ.ಕ್ಷೇ.ಧ.ಗ್ರಾ. ಯೋ. ರಮೇಶ್, ಪಂಚಾಯಿತಿ ಸದಸ್ಯರಾದ ಪೂವಪ್ಪ ಮೆಂಡನ್, ರೂಪಾಶ್ರೀ, ಪತ್ರಕರ್ತರಾದ ಹರೀಶ್ ಮಾಂಬಾಡಿ, ಅಬುಲ್ ರಹಿಮಾನ್ ತಲಪಾಡಿ, ಸಂದೀಪ್ ಸಾಲ್ಯಾನ್ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕ ಮೌರೀಸ್ ಸ್ವಾಗತಿಸಿ, ಶಿಕ್ಷಕಿ ಅನಿತಾ ವಂದಿಸಿದರು. ನಿರೂಪಿಸಿದರು. ಬಳಿಕ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ವಿತರಿಸಲಾಯಿತು.

 

ಜಾಹೀರಾತು

ಬಂಟ್ವಾಳ ತಾಲೂಕಿನ ದಡ್ಡಲಕಾಡು ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಶಾಲಾ ಪ್ರಾರಂಭೋತ್ಸವ ಸಂದರ್ಭ ನಡೆದ ಕಾರ್ಯಕ್ರಮದ ಬಿಡುವಿನಲ್ಲಿ ತಮ್ಮ ಹೆತ್ತವರ ಮೊಬೈಲ್ ಮೂಲಕ ಸೆಲ್ಫೀ ತೆಗೆದು ಸಂಭ್ರಮಪಟ್ಟರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು

About the Author

Bantwal News
2016 ನವೆಂಬರ್ 10ರಂದು ಆರಂಭಗೊಂಡ ಬಂಟ್ವಾಳದ ಮೊದಲ ವೆಬ್ ಪತ್ರಿಕೆ ಇದು. 25 ಲಕ್ಷಕ್ಕಿಂತಲೂ ಅಧಿಕ ಮಂದಿ ಕೇವಲ 45 ತಿಂಗಳಲ್ಲೇ ಓದಿದ ಜಾಲತಾಣವಿದು. ಸಂಪಾದಕ: ಹರೀಶ ಮಾಂಬಾಡಿ. ಬ್ರೇಕಿಂಗ್ ನ್ಯೂಸ್ ಧಾವಂತದಲ್ಲಿ ಅವಸರದ ಸುದ್ದಿ ಕೊಡದೆ, ಮಾಹಿತಿ ಖಚಿತಗೊಂಡ ಬಳಿಕವಷ್ಟೇ ಪ್ರಕಟಿಸಲಾಗುತ್ತದೆ. ಅತಿರಂಜಿತ ಸುದ್ದಿ ಇಲ್ಲಿಲ್ಲ. ಇದು www.bantwalnews.com ಧ್ಯೇಯ.

Be the first to comment on "ಮೋಡಕ್ಕೆ ಅಂಜದೆ ದಡ್ಡಲಕಾಡಿನಲ್ಲಿ ನಡೆಯಿತು ಸಂಭ್ರಮದ ಶಾಲಾ ಪ್ರಾರಂಭೋತ್ಸವ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*