ಬಂಟ್ವಾಳ ತಾಲೂಕಿನ ಪುರಸಭಾ ವ್ಯಾಪ್ತಿಯಲ್ಲಿ ಅವ್ಯಾಹತವಾಗಿ ವಿದ್ಯುತ್ ಸಂಪರ್ಕ ಕಡಿತಗೊಳ್ಳುತ್ತಿದ್ದು, ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ವಿದ್ಯುತ್ ಅಡಚಣೆಯಾಗದಂತೆ ಸೂಕ್ತ ವ್ಯವಸ್ಥೆಯನ್ನು ಕೈಗೊಳ್ಳಬೇಕೆಂದು ಒತ್ತಾಯಿಸಿ ಯುವ ಜನತಾ ದಳ ಬಂಟ್ವಾಳ ಘಟಕದ ವತಿಯಿಂದ ಮೆಸ್ಕಾಂಗೆ ಸೋಮವಾರ ಮನವಿ ಸಲ್ಲಿಸಲಾಯಿತು.
ಜೆಡಿಎಸ್ ಮುಖಂಡ ಹಾರೂನ್ ರಶೀದ್ ನೇತೃತ್ವದಲ್ಲಿ ಯುವ ಜನತಾ ದಳ ನಗರ ಘಟಕ ಅಧ್ಯಕ್ಷ ಸವಾಝ್ ಬಂಟ್ವಾಳ ಅವರು ಬಂಟ್ವಾಳ ಮೆಸ್ಕಾಂ ಇಂಜಿನಿಯರ್ ಅವರಿಗೆ ಮನವಿ ಸಲ್ಲಿಸಿದರು.
ವಿಶೇಷವಾಗಿ ಮೇ ತಿಂಗಳಲ್ಲಿ ರಂಝಾನ್ ಉಪವಾಸವಿರುವುದರಿಂದ ವಿದ್ಯುತ್ ಕಡಿತದಿಂದ ಸಾರ್ವಜನಿಕರ ಇನ್ನಿತರ ಕಾರ್ಯಗಳಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಮೆಸ್ಕಾಂ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಯನ್ನು ಅರಿತು ಸೂಕ್ತ ಕ್ರಮಕೈಗೊಳ್ಳುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…