ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ಪ್ರಾರಂಭೋತ್ಸವ

ಮಾಣಿ  ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ನಡೆಯಿತು.

ಶಾಲೆಗೆ ಹೊಸದಾಗಿ ಸೇರ್ಪಡೆಗೊಂಡ ಹಾಗೂ ಎಲ್.ಕೆ.ಜಿ. ಮಕ್ಕಳನ್ನು ಮೆರವಣಿಗೆಯ ಮೂಲಕ ಶಾಲೆಗೆ ಕರೆತಂದು ಆರತಿ ಬೆಳಗಿ ಪ್ರೀತಿ ಪೂರ್ವಕವಾಗಿ ಬರಮಾಡಿಕೊಳ್ಳಲಾಯಿತು.  ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಲಾಯಿತು.

ಸಂಚಾಲಕರು ಹಾಗೂ ಕಾರ್ಯಕ್ರಮದ ಅಧ್ಯಕ್ಷರಾದ ಜೆ.ಪ್ರಹ್ಲಾದ್ ಶೆಟ್ಟಿ ಮಾತನಾಡಿ  ಹೆತ್ತವರು ಮಕ್ಕಳ ಸರ್ವಾಂಗೀಣ ವಿಕಾಸಕ್ಕಾಗಿ ಶಾಲೆಯೊಂದಿಗೆ ಕೈ ಜೋಡಿಸಿ ಶಾಲೆಯ ಹೆಸರನ್ನು ಉತ್ತುಂಗಕ್ಕೇರಿಸಲು ಸಹಕರಿಸಬೇಕು ಎಂದರು.

ಶಾಲಾ ಆಡಳಿತಾಧಿಕಾರಿ ಸಿ.ಶ್ರೀಧರ್  ಪ್ರಾಸ್ತಾವಿಕ ಮಾತುಗಳನ್ನಾಡುತ್ತಾ  ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಶಾಲೆಯಲ್ಲಿ ದೊರೆಯುವ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಬಾಲಕೃಷ್ಣ ಆಳ್ವ ಮಾತನಾಡಿ ಮಕ್ಕಳಿಗೆ ಶಾಲೆಯಲ್ಲಿ ಸಿಗುವ ಶಿಕ್ಷಣ ಅವರ ಭವಿಷ್ಯ ರೂಪಿಸುವ ಸಾಧನ. ವಿದ್ಯಾಸಂಸ್ಥೆಯ ಹಿರಿಮೆಗೆ ಶಿಕ್ಷಕರೊಡನೆ ಪೋಷಕರೂ ಕೈ ಜೋಡಿಸೋಣ ಎಂದರು.

ಆಡಳಿತ ಮಂಡಳಿಯ ಕಾರ್ಯದರ್ಶಿ ಕೊಂಬಿಲ ನಾರಾಯಣ ಶೆಟ್ಟಿ , ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷೆ ಲಕ್ಷ್ಮೀ , ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಗ್ರೇಸ್.ಪಿ.ಸಲ್ಡಾನ,  ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ವಿಜಯಲಕ್ಷ್ಮೀ .ವಿ.ಶೆಟ್ಟಿ ಉಪಸ್ಥಿತರಿದ್ದರು.  ಶಿಕ್ಷಕಿಯರಾದ ರೀಟಾ ಫೆರ್ನಾಂಡಿಸ್ ಸ್ವಾಗತಿಸಿ , ಮಮತಾ ಎನ್. ವಂದಿಸಿದರು.  ರಶ್ಮಿ ಕೆ. ಫೆರ್ನಾಂಡಿಸ್ ಕಾರ್ಯಕ್ರಮ ನಿರ್ವಹಿಸಿದರು.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ಪ್ರಾರಂಭೋತ್ಸವ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*