ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ನಡೆಯಿತು.
ಶಾಲೆಗೆ ಹೊಸದಾಗಿ ಸೇರ್ಪಡೆಗೊಂಡ ಹಾಗೂ ಎಲ್.ಕೆ.ಜಿ. ಮಕ್ಕಳನ್ನು ಮೆರವಣಿಗೆಯ ಮೂಲಕ ಶಾಲೆಗೆ ಕರೆತಂದು ಆರತಿ ಬೆಳಗಿ ಪ್ರೀತಿ ಪೂರ್ವಕವಾಗಿ ಬರಮಾಡಿಕೊಳ್ಳಲಾಯಿತು. ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಲಾಯಿತು.
ಸಂಚಾಲಕರು ಹಾಗೂ ಕಾರ್ಯಕ್ರಮದ ಅಧ್ಯಕ್ಷರಾದ ಜೆ.ಪ್ರಹ್ಲಾದ್ ಶೆಟ್ಟಿ ಮಾತನಾಡಿ ಹೆತ್ತವರು ಮಕ್ಕಳ ಸರ್ವಾಂಗೀಣ ವಿಕಾಸಕ್ಕಾಗಿ ಶಾಲೆಯೊಂದಿಗೆ ಕೈ ಜೋಡಿಸಿ ಶಾಲೆಯ ಹೆಸರನ್ನು ಉತ್ತುಂಗಕ್ಕೇರಿಸಲು ಸಹಕರಿಸಬೇಕು ಎಂದರು.
ಶಾಲಾ ಆಡಳಿತಾಧಿಕಾರಿ ಸಿ.ಶ್ರೀಧರ್ ಪ್ರಾಸ್ತಾವಿಕ ಮಾತುಗಳನ್ನಾಡುತ್ತಾ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಶಾಲೆಯಲ್ಲಿ ದೊರೆಯುವ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಬಾಲಕೃಷ್ಣ ಆಳ್ವ ಮಾತನಾಡಿ ಮಕ್ಕಳಿಗೆ ಶಾಲೆಯಲ್ಲಿ ಸಿಗುವ ಶಿಕ್ಷಣ ಅವರ ಭವಿಷ್ಯ ರೂಪಿಸುವ ಸಾಧನ. ವಿದ್ಯಾಸಂಸ್ಥೆಯ ಹಿರಿಮೆಗೆ ಶಿಕ್ಷಕರೊಡನೆ ಪೋಷಕರೂ ಕೈ ಜೋಡಿಸೋಣ ಎಂದರು.
ಆಡಳಿತ ಮಂಡಳಿಯ ಕಾರ್ಯದರ್ಶಿ ಕೊಂಬಿಲ ನಾರಾಯಣ ಶೆಟ್ಟಿ , ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷೆ ಲಕ್ಷ್ಮೀ , ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಗ್ರೇಸ್.ಪಿ.ಸಲ್ಡಾನ, ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ವಿಜಯಲಕ್ಷ್ಮೀ .ವಿ.ಶೆಟ್ಟಿ ಉಪಸ್ಥಿತರಿದ್ದರು. ಶಿಕ್ಷಕಿಯರಾದ ರೀಟಾ ಫೆರ್ನಾಂಡಿಸ್ ಸ್ವಾಗತಿಸಿ , ಮಮತಾ ಎನ್. ವಂದಿಸಿದರು. ರಶ್ಮಿ ಕೆ. ಫೆರ್ನಾಂಡಿಸ್ ಕಾರ್ಯಕ್ರಮ ನಿರ್ವಹಿಸಿದರು.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)