ಮಂಗಳೂರು ಸಹಿತ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಂಗಳವಾರ ಸುರಿಯುತ್ತಿರುವ ಮಳೆ ಮುಂಗಾರು ಮಳೆಯಾಗಿದ್ದು, ಯಾವುದೇ ಬಿರುಗಾಳಿ, ಚಂಡಮಾರುತ ಉಂಟಾಗಿಲ್ಲ. ಮುಂಜಾಗರೂಕತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ಜಿಲ್ಲಾದ್ಯಂತ ಬುಧವಾರ ರಜೆ ಘೋಷಿಸಲಾಗಿದೆ. ಯಾವುದೇ ಆತಂಕಪಡುವ ಅಗತ್ಯವಿಲ್ಲ.
ಹೀಗೆಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎಸ್. ಸಸಿಕಾಂತ ಸೆಂಥಿಲ್ ಜಿಲ್ಲೆಯ ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ.
- ಮಳೆ ಮತ್ತಿತರ ವಿಚಾರಗಳ ಕುರಿತು ಅವರು ಕೆಲವು ಸೂಚನೆಗಳನ್ನು ನೀಡಿದ್ದಾರೆ. ಅವು ಹೀಗಿವೆ.
ಜಿಲ್ಲಾದ್ಯಂತ ಇಂದು ಸುರಿಯುತ್ತಿರುವ ಮಳೆಯು ಮುಂಗಾರು ಮಳೆಯಾಗಿರುತ್ತದೆ. ಯಾವುದೇ ರೀತಿಯ ಬಿರುಗಾಳಿ ಅಥವಾ ಚಂಡಮಾರುತ ಉಂಟಾಗಿರುವುದಿಲ್ಲ. ಸಾರ್ವಜನಿಕರು ಯಾವುದೇ ಆತಂಕಕ್ಕೊಳಗಾಗುವ ಅಗತ್ಯವಿಲ್ಲ
ಈಗಾಗಲೇ ಮಳೆ ನೀರು ನುಗ್ಗಿ ಸಾರ್ವಜನಿಕರ ಜನಜೀವನಕ್ಕೆ ತುಂಬಾ ತೊಂದರೆಯಾಗಿರುವ ಪ್ರದೇಶಗಳಲ್ಲಿ ತುರ್ತು ಕ್ರಮವನ್ನು ಜಿಲ್ಲಾಡಳಿತ ಕೈಗೊಳ್ಳುತ್ತಿದೆ. ಸಾರ್ವಜನಿಕರು ಮಳೆಯಿಂದ ಯಾವುದೇ ಹಾನಿ ಅಥವಾ ಸಮಸ್ಯೆ ಉಂಟಾದಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಂಟ್ರೋಲ್ ರೂಂ ತೆರೆಯಲಾಗಿದ್ದು, ಕಂಟ್ರೋಲ್ ರೂಂ ಸಂಖ್ಯೆ: 1077 ಇದಕ್ಕೆ ಕರೆ ಮಾಡಿ ತಮ್ಮ ಸಮಸ್ಯೆ ತಿಳಿಸಿದರೆ ಕೂಡಲೇ ಸ್ಪಂದಿಸಲಾಗುವುದು.
ಮೀನುಗಾರಿಕಾ ದೋಣಿಗಳು ಮತ್ತು ಬೋಟ್‍ಗಳು ಯಾವುದೇ ಕಾರಣಕ್ಕೂ ಸಮುದ್ರಕ್ಕಿಳಿಯಬಾರದು
ಜಿಲ್ಲಾದ್ಯಂತ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಿಸಲಾಗಿದೆ. ಮಳೆ ಇನ್ನೂ ಮುಂದುವರಿಯುವ ಸಾಧ್ಯತೆ ಇರುವುದರಿಂದ ನದಿ ತೀರದಲ್ಲಿ ವಾಸಿಸುವವರು ಸುರಕ್ಷಿತ ಸ್ಥಳಕ್ಕೆ ತೆರಳಬೇಕು,
ಸಮುದ್ರ ತೀರಕ್ಕೆ ಪ್ರವಾಸಿಗರು ಮತ್ತು ಸಾರ್ವಜನಿಕರು ತೆರಳಬಾರದು ಹಾಗೂ ಇದೊಂದು ಸಾಮಾನ್ಯ ಮಳೆಯಾಗಿದ್ದು ಸಾರ್ವಜನಿಕರು ಆತಂಕಕ್ಕೊಳಗಾಗುವ ಅಗತ್ಯವಿಲ್ಲ
Be the first to comment on "ಮಳೆ ಸಾಮಾನ್ಯ, ಆತಂಕ ಬೇಡ, ನಾಳೆ ಶಾಲಾ ಕಾಲೇಜಿಗೆ ರಜೆ – ದ.ಕ.ಜಿಲ್ಲಾಧಿಕಾರಿ"