ಶ್ರೀ ವೆಂಕಟರಮಣ ಸ್ವಾಮಿ ವಿದ್ಯಾವರ್ಧಕ ಸಂಘದಡಿಯಲ್ಲಿ ಕಾರ್ಯಾಚರಿಸುತ್ತಿರುವ ವಿದ್ಯಾಗಿರಿಯ ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಶಾಲೆಯು ಸಿ.ಬಿ.ಎಸ್.ಇ 2017-18ನೇ ಸಾಲಿನ 10 ನೇ ತರಗತಿ ಪರೀಕ್ಷೆಯಲ್ಲಿ ಸತತ 7ನೇ ಬಾರಿ ಶೇ.100 ಫಲಿತಾಂಶವನ್ನು ದಾಖಲಿಸಿದೆ.
MAHIKA_K.S
NADIYA_RATHORE
RATHNAKAR_PAI_S
JITHIN_BANGERA
JENIVA_WESLIA_VAS
ASHWIN_T_SUNIL_KUMAR
ALINA_JOSE
ಪರೀಕ್ಷೆಗೆ ಹಾಜರಾದ 36 ವಿದ್ಯಾರ್ಥಿಗಳಲ್ಲಿ 18 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರಲ್ಲಿ ಮಹಿಕಾ ಕೆ ಎಸ್, ನಾದಿಯಾ ರಾಥೋರ್, ಜಿತಿನ್ ಬಂಗೇರ, ರತ್ನಾಕರ್ ಪೈ ಎಸ್, ಅಲಿನಾ ಜೋಸ್, ಅಶ್ವಿನ್ ಸುನೀಲ್ ಕುಮಾರ್, ಜೆನಿವಾ ವೆಸ್ಲಿಯಾ ವಾಸ್ ಶೇ.90ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಇವರಲ್ಲಿ ಮಹಿಕಾ ಕೆ ಎಸ್ ಶೇ. 96.4 ಅಂಕ ಪಡೆದು ಪ್ರಥಮ ಸ್ಥಾನವನ್ನೂ, ನಾದಿಯಾ ರಾಥೋರ್ ಶೇ. 95.6 ಅಂಕ ಪಡೆದು ದ್ವಿತೀಯ ಸ್ಥಾನವನ್ನೂ ಪಡೆದಿದ್ದಾರೆ ಎಂದು ಪ್ರಾಂಶುಪಾಲೆ ರಮಾಶಂಕರ್ ಸಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to comment on "ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಶಾಲೆಗೆ ಸತತ 7ನೇ ಬಾರಿ ಶೇ.100 ಫಲಿತಾಂಶ"