ಜೂನ್ 3ರಂದು ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಾರಂಭ


 ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಆತಿಥ್ಯದಲ್ಲಿ ಜೂನ್ 3ರಂದು ಮಧ್ಯಾಹ್ನ ಮಂಗಳೂರಿನ ಊರ್ವ ಸ್ಟೋರಿನ ಯುವವಾಹಿನಿ ಸಭಾಂಗಣದಲ್ಲಿ ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

ಕಥೆ, ಕಾದಂಬರಿಕಾರರಾಗಿ, ನಟ ನಾಟಕಕರ್ತರಾಗಿ, ತಮ್ಮಐದು ದಶಕಗಳ ಬದುಕಿನಲ್ಲಿ ಬಹುಮುಖ ಪ್ರತಿಭೆಯಿಂದ ಕನ್ನಡ ಹಾಗೂ ತುಳು ಭಾಷೆಗಳೆರಡರಲ್ಲೂ ಕಲಾ ಸೇವೆ ಮಾಡಿ ಅಲ್ಪಆಯುಷ್ಯದಲ್ಲೇ ಸಂದು ಹೋದ ವಿಶುಕುಮಾರರ ಗೌರವಾರ್ಥವಾಗಿ ಯುವವಾಹಿನಿ ಸಂಸ್ಥೆಯ ವತಿಯಿಂದ ವಿಶುಕುಮಾರ್ ಪ್ರಶಸ್ತಿ ನೀಡಲಾಗುತ್ತಿದೆ.

ಯುವವಾಹಿನಿ ಸಂಸ್ಥೆಯು ಕಳೆದ 15 ವರ್ಷಗಳಿಂದ ವಿಶುಕುಮಾರ್ ಪ್ರಶಸ್ತಿ ನೀಡುತ್ತಾ ಬಂದಿದೆ. 2017ನೇ ಸಾಲಿನ ವಿಶುಕುಮಾರ್ ಪ್ರಶಸ್ತಿಯನ್ನು ಹಿರಿಯ ಸಾಹಿತಿ ಬಿ.ಎಮ್. ರೋಹಿಣಿ ಇವರಿಗೆ ನೀಡಿ ಗೌರವಿಸಲಾಗುವುದು.

ಕರ್ನಾಟಕ ತುಳು ಸಾಹಿತ್ಯಅಕಾಡೆಮಿಯ ಅಧ್ಯಕ್ಷ .ಸಿ.ಭಂಡಾರಿ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ .ಯು.ಎಸ್.ಮಲ್ಯ ಪ್ರಶಸ್ತಿ ಪುರಸ್ಕೃತ ಹಿರಿಯ ಸಂಘಟಕಿ ಕೆ..ರೋಹಿಣಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಖ್ಯಾತರಂಗಕರ್ಮಿ ವಿ.ಜಿ.ಪಾಲ್ ಮುಖ್ಯಅತಿಥಿಯಾಗಿ ಭಾಗವಹಿಸಲಿದ್ದಾರೆ.

ಸಮಾರಂಭದಲ್ಲಿ ಸಹೃದಯಿ ಸಾಹಿತ್ಯ ಪ್ರೇಮಿಗಳು ಭಾಗವಹಿಸಿ ಯಶಸ್ವೀಗೊಳಿಸಬೇಕೆಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಜೂನ್ 3ರಂದು ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಾರಂಭ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*