ಬಂಟ್ವಾಳ

ಮರದ ದಿಮ್ಮಿ ಅಕ್ರಮ ಸಾಗಾಟ ಪತ್ತೆ

ಮರದ ದಿಮ್ಮಿಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪದಲ್ಲಿ ಬಂಟ್ವಾಳ ತಾಲೂಕಿನ ಕೊಳ್ನಾಡು ಅಬ್ದುಲ್ ರಜಾಕ್ ಎಂಬಾತನನ್ನು ಬಂಧಿಸಲಾಗಿದೆ. ಬಂಟ್ವಾಳ ತಾಲೂಕು ಮಂಚಿ ಗ್ರಾಮದ ನಾಡಾಜೆ ಎಂಬಲ್ಲಿ ಅಕ್ರಮವಾಗಿ ಪರವಾನಿಗೆ ರಹಿತ ಸುಮಾರು 4 ಲಕ್ಷ ರೂ ಮೌಲ್ಯದ  ಮರದ ದಿಮ್ಮಿಗಳನ್ನು ಸಾಗಾಟ ಮಾಡುತ್ತಿದ್ದ ವಾಹನ ವನ್ನು ಬಂಟ್ವಾಳ ವಲಯ ಅರಣ್ಯಾಧಿಕಾರಿಗಳನ್ನು ವಶಪಡಿಸಿಕೊಂಡರು.

ಜಾಹೀರಾತು

ಈ ಸಂದರ್ಭ ಚಾಲಕ ಕೊಳ್ನಾಡು ಅಬ್ದುಲ್ ರಜಾಕ್ ಎಂಬಾತನನ್ನು ಬಂಧಿಸಲಾಯಿತು. ಆರೋಪಿ ಜಾಮೀನಿನ ಮೇಲೆ ಬಿಡುಗಡೆ ಹೊಂದಿದ್ದಾನೆ. ಕಾರ್ಯಚರಣೆ ಯಲ್ಲಿ ವಲಯ ಅರಣ್ಯಾಧಿಕಾರಿ ಸುರೇಶ್ ಬಿ. ಉಪವಲಯಾರಣ್ಯಾಧಿಕಾರಿ  ಪ್ರೀತಂ ಅರಣ್ಯ ರಕ್ಷಕರಾದ ಜಿತೇಶ್ ಪಿ, ದಯಾನಂದ , ವಿನಯಕುಮಾರ್, ಶಿವಲಿಂಗ ಸ್ವಾಮಿ ಭಾಗವಸಿದ್ದರು. ಮುಂದಿನ ತನಿಖೆಯನ್ನು ಉಪಾರಣ್ಯ ಸಂರಕ್ಷಣಾಧಿಕಾರಿ ಡಾ! ಕರಿಕಲನ್ ಅವರ ಮಾರ್ಗದರ್ಶನ ದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಂಕರ ಗೌಡ ನಡೆಸುತ್ತಿದ್ದಾರೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಾ.30ರಂದು ಪದ್ಯಾಣಕ್ಕೆ ಏಕಾದಶ ತೀರ್ಥಗಳ ಭವ್ಯ ಮೆರವಣಿಗೆ:

| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…

17 hours ago

ಯಕ್ಷಗಾನದ ದಶಾವತಾರಿ ಸೂರಿಕುಮೇರು ಗೋವಿಂದ ಭಟ್ ಇನ್ನಿಲ್ಲ

ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…

2 days ago