ರಾಜ್ಯ ವಿಧಾನ ಪರಿಷತ್ ಗೆ ನಡೆಯಲಿರುವ ದ್ವೈವಾರ್ಷಿಕ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಸೇರಿದಂತೆ ನಾಲ್ವರು ಅಭ್ಯರ್ಥಿ ಗಳು ಗುರುವಾರ ನಾಮಪತ್ರ ಸಲ್ಲಿಸಿದ್ದಾರೆ.
ಮಾಜಿ ಸಚಿವ ಸಿ.ಎಂ ಇಬ್ರಾಹಿಂ, ಕೆ. ಗೋವಿಂದರಾಜು, ಅರವಿಂದ ಕುಮಾರ್ ಅರಳಿ ಅವರು ಇತರ ಅಭ್ಯರ್ಥಿಗಳಾಗಿದ್ದಾರೆ. ಜೂನ್ 11ರಂದು ಚುನಾವಣೆ ನಡೆಯಲಿದೆ. ಬಿಜೆಪಿಯಿಂದ ತೇಜಸ್ವಿನಿ ಗೌಡ ಸೇರಿದಂತೆ ಐವರು ನಾಮಪತ್ರ ಸಲ್ಲಿಸಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ವಿಧಾನ ಪರಿಷತ್‌ಗೆ ಚುನಾವಣೆಗೆ ಸ್ಪರ್ಧಿಸಲು ಆಯ್ಕೆ ಆಗಿರುವುದಕ್ಕೆ ಬಿಲ್ಲವ ಮುಖಂಡ, ಬಂಟ್ವಾಳ ತಾಲೂಕು ಪಂಚಾಯಿತಿ ಸದಸ್ಯ ಸಂಜೀವ ಪೂಜಾರಿ ಹರ್ಷ ವ್ಯಕ್ತ ಪಡಿಸಿದ್ದಾರೆ. ಬಿಲ್ಲವ ಸಮುದಾಯದ ಹರೀಶ್ ಕುಮಾರ್ ಅವರಿಗೆ ವಿಧಾನ ಪರಿಷತ್ ಪ್ರವೇಶಕ್ಕೆ ಅವಕಾಶ ನೀಡಿದ್ದು, ಸಹಕರಿಸಿದ ಪಕ್ಷದ ಎಲ್ಲಾ ಮುಖಂಡರಿಗೂ ಕೃತಜ್ಞತೆಯನ್ನು ಸಲ್ಲಿಸಿದ್ದಾರೆ.
Be the first to comment on "ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್ ವಿಧಾನಪರಿಷತ್ತು ಸ್ಪರ್ಧೆ, ನಾಮಪತ್ರ ಸಲ್ಲಿಕೆ"