ಶಾಲಾ ಪ್ರಾರಂಭೋತ್ಸವ ಸಂದರ್ಭ ನೂತನ ಮುಖ್ಯೋಪಾದ್ಯಾಯರಾದ ಜೋನ್ಸನ್ ಸಿಕ್ವೇರಾ ಅವರಿಗೆ ಸ್ವಾಗತ ಕಾರ್ಯಕ್ರಮ ಲೊರೆಟ್ಟೋ ಶಾಲೆಯಲ್ಲಿ ನಡೆಯಿತು.
ಲೊರೆಟ್ಟೊ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ಭಗಿನಿ ಶಾಂತಿ ಲೋಬೊ ಅವರ ಬೀಳ್ಕೊಡುಗೆ, ನೂತನ ಮುಖ್ಯೋಪಾದ್ಯಾಯರಾದ ವಂ|ಜೋನ್ಸನ್ ಸಿಕ್ವೇರಾ ಅವರಿಗೆ ಸ್ವಾಗತ, ಹೊಸದಾಗಿ ನೇಮಕಗೊಂಡ ಶಿಕ್ಷಕರ ಸ್ವಾಗತ ಹಾಗೂ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ನಡೆಯಿತು.
ಶಾಲಾ ಸಂಚಾಲಕರಾದ ವಂ| ಎಲಿಯಾಸ್ ಡಿ’ಸೋಜ, ಪಾಲನಾ ಮಂಡಳಿಯ ಉಪಾಧ್ಯಕ್ಷರಾದ ರಿಚ್ಚರ್ಡ್ ಮಿನೇಜಸ್, ಶಾಲಾ ಆಡಳಿತ ಮಂಡಳಿಯ ಸದಸ್ಯರು, ಕನ್ನಡ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ಹಾಗೂ ಸಿಬ್ಬಂದಿ ವರ್ಗ, ಆಂಗ್ಲ ಮಾಧ್ಯಮ ಶಾಲೆಯ ಸಿಬ್ಬಂದಿ ವರ್ಗ ಹಾಗೂ ಉಭಯ ಶಾಲೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸಂಚಾಲಕರಾದ ವಂ| ಎಲಿಯಾಸ್ ಡಿ’ಸೋಜ ಶಾಲೆಯ ಮುಂದಿನ ಜವಾಬ್ದಾರಿಯನ್ನು ನೂತನ ಮುಖ್ಯೋಪಾಧ್ಯಾಯರಿಗೆ ಹಸ್ತಾಂತರಿಸಿದರು. ಚರ್ಚ್ ಪಾಲನಾ ಮಂಡಳಿಯ ಸದಸ್ಯರು ಹಾಗೂ ಶಾಲಾ ಆಡಳಿಯ ಮಂಡಳಿಯ ಸದಸ್ಯರು ಜೊತೆ ಸೇರಿ ವಿದ್ಯಾರ್ಥಿಗಳಿಗೆ ಸಿಹಿ ಹಂಚಿದರು. ಅನಿತಾ ಕಾರ್ಯಕ್ರಮ ನಿರ್ವಹಿಸಿದರು.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…