ಬಂಟ್ವಾಳ

ಲೊರೆಟ್ಟೊ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

ಶಾಲಾ ಪ್ರಾರಂಭೋತ್ಸವ ಸಂದರ್ಭ ನೂತನ ಮುಖ್ಯೋಪಾದ್ಯಾಯರಾದ ಜೋನ್ಸನ್ ಸಿಕ್ವೇರಾ ಅವರಿಗೆ ಸ್ವಾಗತ ಕಾರ್ಯಕ್ರಮ ಲೊರೆಟ್ಟೋ ಶಾಲೆಯಲ್ಲಿ ನಡೆಯಿತು.

ಲೊರೆಟ್ಟೊ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ಭಗಿನಿ ಶಾಂತಿ ಲೋಬೊ ಅವರ ಬೀಳ್ಕೊಡುಗೆ, ನೂತನ ಮುಖ್ಯೋಪಾದ್ಯಾಯರಾದ ವಂ|ಜೋನ್ಸನ್ ಸಿಕ್ವೇರಾ ಅವರಿಗೆ ಸ್ವಾಗತ, ಹೊಸದಾಗಿ ನೇಮಕಗೊಂಡ ಶಿಕ್ಷಕರ ಸ್ವಾಗತ ಹಾಗೂ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ನಡೆಯಿತು.

ಶಾಲಾ ಸಂಚಾಲಕರಾದ ವಂ| ಎಲಿಯಾಸ್ ಡಿಸೋಜ, ಪಾಲನಾ ಮಂಡಳಿಯ ಉಪಾಧ್ಯಕ್ಷರಾದ ರಿಚ್ಚರ್ಡ್ ಮಿನೇಜಸ್, ಶಾಲಾ ಆಡಳಿತ ಮಂಡಳಿಯ ಸದಸ್ಯರು, ಕನ್ನಡ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ಹಾಗೂ ಸಿಬ್ಬಂದಿ ವರ್ಗ, ಆಂಗ್ಲ ಮಾಧ್ಯಮ ಶಾಲೆಯ ಸಿಬ್ಬಂದಿ ವರ್ಗ ಹಾಗೂ ಉಭಯ ಶಾಲೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಜಾಹೀರಾತು

ಸಂಚಾಲಕರಾದ ವಂ| ಎಲಿಯಾಸ್ ಡಿಸೋಜ ಶಾಲೆಯ ಮುಂದಿನ ಜವಾಬ್ದಾರಿಯನ್ನು ನೂತನ ಮುಖ್ಯೋಪಾಧ್ಯಾಯರಿಗೆ ಹಸ್ತಾಂತರಿಸಿದರು. ಚರ್ಚ್ ಪಾಲನಾ ಮಂಡಳಿಯ ಸದಸ್ಯರು ಹಾಗೂ ಶಾಲಾ ಆಡಳಿಯ ಮಂಡಳಿಯ ಸದಸ್ಯರು ಜೊತೆ ಸೇರಿ ವಿದ್ಯಾರ್ಥಿಗಳಿಗೆ ಸಿಹಿ ಹಂಚಿದರು. ಅನಿತಾ ಕಾರ್ಯಕ್ರಮ ನಿರ್ವಹಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ