ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಸಾರ್ವಜನಿಕ ಸಭೆಯೊಂದು ಜೂನ್ 11ರಂದು ಬಿ.ಸಿ.ರೋಡಿನಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯಲಿದೆ. ಕಾಂಗ್ರೆಸ್ ನ ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಬಿ.ಎಂ.ಅಬ್ಬಾಸ್ ಆಲಿ ಮತ್ತು ಬಂಟ್ವಾಳ ಬ್ಲಾಕ್ ಅಧ್ಯಕ್ಷ ಮಾಯಿಲಪ್ಪ ಸಾಲಿಯಾನ್ ಈ ಕುರಿತು ಪ್ರಕಟಣೆ ನೀಡಿದ್ದು, ಸಭೆಯಲ್ಲಿ ಪೆಟ್ರೋಲ್ , ಡಿಸೇಲ್, ಗ್ಯಾಸ್ , ಮುಂತಾದವುಗಳ ಬೆಲೆ ಏರಿಕೆಯ ವಿರುದ್ಧ ಮಾಜಿ ಸಚಿವ ಬಿ.ರಮಾನಾಥ ರೈ ಪ್ರಧಾನ ಭಾಷಣ ಮಾಡುವರು ಎಂದು ತಿಳಿಸಿದ್ದಾರೆ.