ಪಾಣೆಮಂಗಳೂರಿನ ಎಸ್ ಎಲ್ ಎನ್ ಪಿ ವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆ ವಿದ್ಯಾ ಸಂಸ್ಥೆಯ ಮುಖ್ಯಸ್ಥರಾದ ರಮಾ ಎಸ್ ಭಂಡಾರಿ ಅಧ್ಯಕ್ಷತೆಯಲ್ಲಿ ನಡೆಯಿತು.
ಬಂಟ್ವಾಳ ಎಸ್ ವಿ ಎಸ್ ಪದವಿ ಕಾಲೇಜಿನ ನಿವೃತ್ತ ಕನ್ನಡ ಉಪನ್ಯಾಸಕರಾದ ರಾಜಮಣಿ ರಾಮಕುಂಜ ಮುಖ್ಯ ಅತಿಥಿಗಳಾಗಿ ಆಗಮಿಸಿ, ವಿಶ್ವ ಪರಿಸರ ದಿನಾಚರಣೆಯು ಕೇವಲ ಒಂದು ದಿನದ ಆಚರಣೆಯಾಗಿರದೆ, ಅದು ರೂಢಿಯಾಗಬೇಕು. ಹಾಗೆಯೇ ಕೇವಲ ವಿಶ್ವ ಪರಿಸರ ದಿನಾಚರಣೆಯಂದು ಮಾತ್ರ ಪರಿಸರದ ಬಗ್ಗೆ ಜಾಗೃತಿ ವಹಿಸುವುದು ಮಾತ್ರವಲ್ಲದೆ ಪ್ರತಿ ನಿತ್ಯ ಪರಿಸರದ ಬಗ್ಗೆ ಕಾಳಜಿ ವಹಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಹೇಳಿದರು.
ಕನ್ನಡ ಅಧ್ಯಾಪಕ ರಮೇಶ್ ವಿಶ್ವ ಪರಿಸರ ದಿನಾಚರಣೆಯ ಕುರಿತು ಪ್ರಾಸ್ತಾವಿಕ ನುಡಿಗಳನ್ನಾಡಿದರು.
ವಿದ್ಯಾರ್ಥಿನಿ ಆರಾಧನಾ ಶೆಣೈ ವಿಶ್ವ ಪರಿಸರ ದಿನಾಚರಣೆಯ ಮಹತ್ವ ಕುರಿತು ಮಾತನಾಡಿದರು. ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯಿನಿ ಭಾರತಿ ಸೋಮಯಾಜಿ ಹಾಗೂ ಶಿಕ್ಷಕ ಶಿಕ್ಷಕೇತರ ವರ್ಗದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಧೃತಿ ಸ್ವಾಗತಿಸಿ, ವಿದ್ಯಾರ್ಥಿ ಸುಮುಖ್ ಶೆಣೈ ವಂದಿಸಿದರು. ವಿದ್ಯಾರ್ಥಿನಿ ಸಮೀಕ್ಷಾ ಕಾರ್ಯಕ್ರಮ ನಿರೂಪಿಸಿದರು.
Be the first to comment on "ಎಸ್.ಎಲ್.ಎನ್.ಪಿ. ವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆ"