ಕಂದಾಯ ಇಲಾಖೆಯಲ್ಲಿ ಸುದೀರ್ಘ 24 ವರ್ಷಗಳ ಕಾಲ ಗ್ರಾಮ ಕರಣಿಕರಾಗಿ ಮತ್ತು ಪ್ರಥಮ ದರ್ಜೆ ಸಹಾಯಕರಾಗಿ ಕರ್ತವ್ಯ ಸಲ್ಲಿಸಿ ನಿವೃತ್ತಿಗೊಂಡ ಸುಧಾ ಅವರ ಬೀಳ್ಕೊಡುಗೆ ಕಾರ್ಯಕ್ರಮ ಬಂಟ್ವಾಳ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ತಹಶೀಲ್ದಾರ್ ವೈ.ರವಿ ಅಧ್ಯಕ್ಷತೆಯಲ್ಲಿ ಜರಗಿತು.
ಉಪತಹಶೀಲ್ದಾರ್ ರಾಜೇಶ್ ನಾಯ್ಕ್ , ಗ್ರೆಟ್ಟಾ ಮೆಸ್ಕರೇನಸ್, ಸೀತಾರಾಮ, ಕಂದಾಯ ನಿರೀಕ್ಷಕ ನವೀನ್ ಕುಮಾರ್ , ಗ್ರಾಮಕರಣಿಕರಾದ ಜನಾರ್ಧನ್ ಜೆ., ಶಿವಾನಂದ ಎಸ್.ನಾಟೆಕಾರ್, ಮಲ್ಲೇಶ್ ಮತ್ತಿತರರು ಉಪಸ್ಥಿತರಿದ್ದರು.