ಸಾಮಾಜಿಕ ಸಾಮರಸ್ಯದ ಸಮಾಜ ಕಟ್ಟಲು ಎಲ್ಲರಿಗೂ ಭಗವಂತ ಪ್ರೇರಣೆ ನೀಡಲಿ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು.
ಶುಕ್ರವಾರ ಸಂಜೆ ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ಆಯೋಜಿಸಲಾಗಿದ್ದ ಇಫ್ತಾರ್ ಕೂಟದಲ್ಲಿ ಮಾತನಾಡಿದ ಅವರು, ಭಗವಂತನ ಅನುಗ್ರಹ ಪಡೆಯುವ ನಿಟ್ಟಿನಲ್ಲಿ ಪವಿತ್ರ ರಂಝಾನ್ ಉಪವಾಸ ಕ್ಕೆ ಹೆಚ್ಚು ಮಹತ್ವವಿದೆ ಎಂದು ಹೇಳಿದರು.
ಸಾಮಾಜಿಕ ಸಾಮರಸ್ಯ, ಸೌಹಾರ್ದದ ಸಂಕೇತವಾಗಿ ಪ್ರತೀವರ್ಷ ಇಫ್ತಾರ್ ಕೂಟ ಏರ್ಪಡಿಸುತ್ತಿದ್ದು, ಸರ್ವಧರ್ಮದ ಬಂಧುಗಳು ಭಾಗವಹಿಸುತ್ತಿದ್ದಾರೆ ಎಂದು ರೈ ಹೇಳಿದರು.
ವಿಧಾನಪರಿಷತ್ ಸದಸ್ಯ ಹರೀಶ್ ಕುಮಾರ್, ಜಿಪಂ ಸದಸ್ಯರಾದ ಚಂದ್ರಪ್ರಕಾಶ ಶೆಟ್ಟಿ ತುಂಬೆ, ಎಂ.ಎಸ್.ಮಹಮ್ಮದ್, ಪದ್ಮಶೇಖರ ಜೈನ್, ಸಾಹುಲ್ ಹಮೀದ್, ಯು.ಪಿ.ಇಬ್ರಾಹಿಂ, ಬಂಟ್ವಾಳ ತಾಪಂ ಉಪಾಧ್ಯಕ್ಷ ಅಬ್ಬಾಸ್ ಅಲಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಬಂಗೇರ, ಎಪಿಎಂಸಿ ಅಧ್ಯಕ್ಷ ಪದ್ಮನಾಭ ರೈ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಾಯಿಲಪ್ಪ ಸಾಲಿಯಾನ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬೇಬಿ ಕುಂದರ್, ಪಕ್ಷ ಪ್ರಮುಖರಾದ ಸಂಜೀವ ಪೂಜಾರಿ ಬೊಳ್ಳಾಯಿ, ಪ್ರ.ಕಾರ್ಯದರ್ಶಿ ಚಂದ್ರಶೇಖರ ಪೂಜಾರಿ, ತಾಪಂ,ಪುರಸಭಾ ಕಾಂಗ್ರೆಸ್ ಸದಸ್ಯರ ಸಹಿತ ಹಲವಾರು ಗಣ್ಯರು ಉಪಸ್ಥಿತರಿದ್ದರು ಮಿತ್ತಬೈಲ್ ಮಸೀದಿಯ ಇರ್ಷಾದ್ ದಾರಿಮಿ ದುವಾ ಪ್ರಾರ್ಥಿಸಿದರು.. ರಾಜೀವ ಕಕ್ಯಪದವು ನಿರೂಪಿಸಿ ವಂದಿಸಿದರು.
Be the first to comment on "ರಮಾನಾಥ ರೈ ನೇತೃತ್ವದಲ್ಲಿ ಬಂಟ್ವಾಳದಲ್ಲಿ ಇಫ್ತಾರ್ ಕೂಟ"