ಶರತ್ ಮಡಿವಾಳ ಹತ್ಯೆಯಲ್ಲಿ ತನ್ನ ಹೆಸರನ್ನು ಬಳಸಿ ಅಪಪ್ರಚಾರ ನಡೆಸಲಾಗಿದೆ, ನನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡಿರುವವರನ್ನು ಕರೆಸಿ ವಿಚಾರಣೆ ನಡೆಸಬೇಕು ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಅವರು ಕಾರಣಿಕ ಕ್ಷೇತ್ರ ಕಾನತ್ತೂರು ಶ್ರೀ ನಾಲ್ವರ್ ದೈವಂಗಳ್ ಮೊರೆ ಹೋಗಿದ್ದಾರೆ.
ಶನಿವಾರ ಕ್ಷೇತ್ರಕ್ಕೆ ಭೇಟಿ ನೀಡಿದ ಅವರು, ದೈವಸ್ಥಾನದ ಪ್ರಮುಖರಲ್ಲಿ ಈ ಕುರಿತು ಅರಿಕೆ ಮಾಡಿಕೊಂಡಿದ್ದಾರೆ. ಶರತ್ ಹತ್ಯೆ ವಿಚಾರದಲ್ಲಿ ವಿನಾಕಾರಣ ನನ್ನ ಹೆಸರನ್ನು ಬಳಸಿ ಅಪಪ್ರಚಾರ ನಡೆಸಲಾಗಿದೆ. ಇದರಿಂದ ಮಾನಸಿಕವಾಗಿ ನನಗೆ ತೀವ್ರ ನೋವಾಗಿದೆ. ನಾನು ತಪ್ಪು ಮಾಡಿದ್ದರೆ ನನಗೆ ಶಿಕ್ಷೆಯಾಗಬೇಕು. ನನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡಿರುವವರನ್ನು ಕರೆದು ವಿಚಾರಣೆ ನಡೆಸಬೇಕು ಎಂದು ಬಿ.ರಮಾನಾಥ ರೈ ಅರಿಕೆ ಮಾಡಿಕೊಂಡರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತು ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಬಿ.ಪದ್ಮಶೇಖರ್ ಜೈನ್, ಡಿಸಿಸಿ ಉಪಾಧ್ಯಕ್ಷ ಬೇಬಿ ಕುಂದರ್,ಕೆ.ಮಾಯಿಲಪ್ಪ ಸಾಲ್ಯಾನ್, ಸದಾಶಿವ ಬಂಗೇರ ಮೊದಲಾದವರಿದ್ದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…