ರಾಜ್ಯ ನಗರಾಭಿವೃದ್ದಿ ಸಚಿವ ಯು.ಟಿ.ಖಾದರ್ ಅವರು ಭಾನುವಾರ ಮಾಜಿ ಸಚಿವ ಬಿ.ರಮಾನಾಥ ರೈ ಅವರನ್ನು ಕಳ್ಳಿಗೆಯಲ್ಲಿರುವ ಅವರ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು.
ಇದು ಸೌಜನ್ಯದ ಭೇಟಿಯಾಗಿದ್ದು, ಈ ಸೋಲು ತಾತ್ಕಾಲಿಕವಾಗಿದೆ, ಯಾರು ಕೂಡ ಎದೆಗುಂದದೆ ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಪಕ್ಷ ವನ್ನು ಸಂಘಟನಾತ್ಮಕವಾಗಿ ಸಂಘಟಿಸಿ ಅಧಿಕಾರಕ್ಕೆ ತರಲು ಎಲ್ಲರೂ ಜೊತೆಯಾಗಿ ಪ್ರಯತ್ನಿಸೋಣ ಎಂದ ಸಚಿವ ಯು.ಟಿ.ಖಾದರ್ ಜಿಲ್ಲೆಯ ಅಭಿವೃದ್ದಿ ದೃಷ್ಟಿಯಿಂದಲೂ ಸಲಹೆ,ಸಹಕಾರವನ್ನು ಯಾಚಿಸಿದರು.
ಬಂಟ್ವಾಳ ತಾಪಂ ಉಪಾಧ್ಯಕ್ಷ ಅಬ್ಬಾಸ್ ಅಲಿ,ಇರಾ ಗ್ರಾಪಂ ಅಧ್ಯಕ್ಷ ಅಬ್ದುಲ್ ರಜಾಕ್ , ದ.ಕ.ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬೇಬಿ ಕುಂದರ್, ಪ್ರಮುಜಖರಾದ ಡೆಂಜಿಲ್ ನೊರಾನ್ಹಾ ಅಲ್ಲಿಪಾದೆ ಮೊದಲಾದವರಿದ್ದರು.
ಬಳಿಕ ಸಚಿವ ಖಾದರ್ ಅವರು,ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಮಾಜಿ ಸಚಿವ ಅಭಯಚಂದ್ರ ಜೈನ್,ಮಾಜಿ ಶಾಸಕ ವಸಂತ ಬಂಗೇರ ಅವರ ನಿವಾಸಕ್ಕೂ ಭೇಟಿ ನೀಡಿ ಅವರೊಂದಿಗೆ ಕುಶಲೋಪಚರಿ ನಡೆಸಿದರು.ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದು ಜಿಲ್ಲೆಯ ಅಭಿವೃದ್ದಿ ವಿಚಾರದಲ್ಲಿ ಸಲಹೆ,ಸಹಕಾರವನ್ನು ಕೋರಿದರು.ಈ ವೇಳೆ ವಿಪ ಸದಸ್ಯ ಹರೀಶ್ ಕುಮಾರ್ ಉಪಸ್ಥಿತರಿದ್ದರು.