ಲಾರಿಯೊಂದು ಹೂತುಹೋಗಿ ರಾಷ್ಟ್ರೀಯ ಹೆದ್ದಾರಿ ಮೇಲ್ಕಾರ್ ನಲ್ಲಿ ಸುಮಾರು ಒಂದು ತಾಸಿಗೂ ಅಧಿಕ ಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಸೋಮವಾರ ಸಂಜೆಯ ವೇಳೆಗೆ ಲಾರಿಯೊಂದು ಮೇಲ್ಕಾರ್ ಪೆಟ್ರೋಲ್ ಪಂಪ್ ಸಮೀಪ ಹೂತು ಹೋಗಿದ್ದು ಸಮಸ್ಯೆಗೆ ಕಾರಣವಾಯಿತು.
ಬಳಿಕ ಅದನ್ನು ತೆರವುಗೊಳಿಸಲಾಯಿತು. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ರಸ್ತೆಯ ಪಕ್ಕ ಕೆಸರು ಮಣ್ಣು ಸೇರುತ್ತಿದ್ದು, ವಾಹನಗಳು ಹೂತು ಹೋಗುವ ದೃಶ್ಯಗಳು ಸಾಮಾನ್ಯವಾಗುತ್ತಿವೆ. ರಾಷ್ಟ್ರೀಯ ಹೆದ್ದಾರಿ ಅಗಲಗೊಳಿಸುವ ಕಾರ್ಯ ಈ ಭಾಗದಲ್ಲಿ ನಡೆಯುತ್ತಿರುವ ಕಾರಣ ತಾತ್ಕಾಲಿಕ ದುರಸ್ತಿಯೂ ಕೈಗೊಳ್ಳುತ್ತಿಲ್ಲ ಎಂದು ಪ್ರಯಾಣಿಕರು ಆಪಾದಿಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಮೇಲ್ಕಾರ್ ನಲ್ಲಿ ಟ್ರಾಫಿಕ್ ಜಾಮ್"