ಬಂಟ್ವಾಳ

ಶಂಭೂರು ಸರಕಾರಿ ಹೈಸ್ಕೂಲಿಗೆ ಸ್ಯಾನಿಟರಿ ನ್ಯಾಪ್ಕಿನ್ ಬರ್ನಿಂಗ್ ಮೆಷಿನ್ ಹಸ್ತಾಂತರ

ಶಂಭೂರಿನಲ್ಲಿರುವ ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆಯಲ್ಲಿ  ಜೇಸಿ ಜೋಡುಮಾರ್ಗ ನೇತ್ರಾವತಿ ಮತ್ತು ರೋಟರಿ ಕ್ಲಬ್ ಬಂಟ್ವಾಳ ವತಿಯಿಂದ ಸ್ಯಾನಿಟರಿ ನ್ಯಾಪ್ಕಿನ್ ಬರ್ನಿಂಗ್ ಮೆಷಿನ್ ಅನ್ನು ಕೊಡುಗೆಯಾಗಿ ನೀಡಲಾಯಿತು.

ಜಾಹೀರಾತು

ಈ ಸಂದರ್ಭ ಮಾತನಾಡಿದ ಜೇಸಿ ವಲಯ 15ರ ಅಧ್ಯಕ್ಷ ರಾಕೇಶ್ ಕುಂಜೂರು, ವಿಧ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿ ಯಲ್ಲಿ ಶಾಲೆ ಮಹತ್ವದ ಪಾತ್ರ ವಹಿಸುತ್ತದೆ. ಈ ನಿಟ್ಟಿನಲ್ಲಿ ಜೇಸೀ ಸಂಸ್ಥೆ ಶಾಲಾ ಮಕ್ಕಳಿಗೆ ವ್ಯಕ್ತಿತ್ವ ವಿಕಸನ ತರಬೇತಿ ಹಾಗೂ ವಿದ್ಯಾರ್ಥಿಗಳಿಗೆ ವೈಯಕ್ತಿಕ ಶುಚಿತ್ವ ಕಾಪಾಡಲು ಬೇಕಾದ ಸಲಕರಣೆಗಳನ್ನು ಶಾಶ್ವತ ಯೋಜನೆ ಮೂಲಕ ಅನುಷ್ಠಾನ ಮಾಡುತ್ತಿದೆ ಎಂದರು.

ಜೇಸಿರೆಟ್ ವಿಭಾಗದ ಅಧ್ಯಕ್ಷೆ ಗಾಯತ್ರಿ ಲೋಕೇಶ್, ಶಾಲಾ ಮುಖ್ಯ ಶಿಕ್ಷಕರಾದ ಕಮಲಾಕ್ಷ ಕಲ್ಲಡ್ಕ, ಜೇಸೀ ವಲಯದ ಪೂರ್ವಾಧ್ಯಕ್ಷರಾದ ಸಂದೀಪ್ ಕುಮಾರ್, ರೋಟರಿ ಕ್ಲಬ್ ಬಂಟ್ವಾಳ ಟೌನ್ ನಿಯೋಜಿತ ಅಧ್ಯಕ್ಷ ರಾದ ಉಮೇಶ್ ನಿರ್ಮಲ್, ಯುವ ಜೇಸಿ ವಿಭಾಗದ ಅಧ್ಯಕ್ಷೆ ದಿವ್ಯಾ, ಇಂಟರಾಕ್ಟ್ ಕ್ಲಬ್ ನ ಅಧ್ಯಕ್ಷ ರಾದ ದರ್ಶಿತ್ ಉಪಸ್ತಿತರಿದ್ದರು. ಅಧ್ಯಕ್ಷತೆ ಜೇಸೀ ಐ ಜೋಡುಮಾರ್ಗ ನೇತ್ರಾವತಿ ಅಧ್ಯಕ್ಷರಾದ ಸವಿತಾ ನಿರ್ಮಲ್ ವಹಿಸಿದ್ದರು. ಉಮೇಶ್ ನಿರ್ಮಲ್ ಯೋಜನೆಯ ಬಗ್ಗೆ ಪ್ರಸ್ತಾವನೆ ನೀಡಿದರು. ರಚನಾ ಸ್ವಾಗತಿಸಿದರು. ಪವನ್ ರಾಜ್ ವಂದನಾರ್ಪಣೆ ಸಲ್ಲಿಸಿದರು. ಪಾವನ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ