ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಕರ್ನಾಟಕ ಸರಕಾರದ ಆದೇಶದಂತೆ, ಪ್ಲಾಸ್ಟಿಕ್ ನಿಷೇಧ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಉದ್ದೇಶಿಸಲಾಗಿದೆ.
ಈ ನಿಟ್ಟಿನಲ್ಲಿ ಉದ್ಯಮದಾರರಿಗೆ ಮತ್ತು ಸಾರ್ವಜನಿಕರಿಗೆ ಸಾಕಷ್ಟು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ.
ಮುಂದಿನ ದಿನಗಳಲ್ಲಿ ಪುರಸಭೆಯ ವತಿಯಿಂದ ಅಂಗಡಿಗಳಿಗೆ ದಾಳಿ ನಡೆಸಲು ಕ್ರಮಕೈಗೊಳ್ಳಲಾಗಿದ್ದು, ಈ ಸಂದರ್ಭ ನಿಷೇಧಿತ ಪ್ಲಾಸ್ಟಿಕ್ ಸಾಮಾಗ್ರಿಗಳು ಕಂಡುಬಂದಲ್ಲಿ, ಅಂತಹ ಸಾಮಾಗ್ರಿಗಳನ್ನು ಮುಟ್ಟುಗೋಲು ಹಾಕಿಕೊಂಡು, 5000 ರೂವರೆಗೆ ದಂಡ ವಿಧಿಸಲಾಗುವುದು. ಉದ್ಯಮದಾರರು ಇಂತಹ ಪ್ರಕರಣಗಳಿಗೆ ಅವಕಾಶ ನೀಡದೇ, ನಿಷೇಧಿತ ಪ್ಲಾಸ್ಟಿಕ್ ಸಾಮಾಗ್ರಿಗಳನ್ನು ಮಾರಾಟ ಮಾಡದೇ, ಬಳಕೆ ಮಾಡದೇ, ಬಂಟ್ವಾಳ ಪುರಸಭೆಯೊಂದಿಗೆ ಸಹಕರಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದೆ.
Be the first to comment on "ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ನಿಷೇಧ ಕಾಯ್ದೆ ಕಟ್ಟುನಿಟ್ಟು ಜಾರಿ"