ಬಂಟ್ವಾಳ

ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ವಿರುದ್ಧ ಕಾರ್ಯಾಚರಣೆ

ಬಂಟ್ವಾಳ ಪುರಸಭೆ ವ್ಯಾಪ್ತಿಯ ಹಲವೆಡೆ ಪ್ಲಾಸ್ಟಿಕ್ ಬಳಕೆಯ ನಿಷೇಧವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಅಧಿಕಾರಿಗಳ ತಂಡ ಅಂಗಡಿ ಮಳಿಗೆಗಳಿಗೆ ಭೇಟಿ ನೀಡಿ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಯಿತು.

ಜಾಹೀರಾತು

ಬುಧವಾರ ಇಲ್ಲಿನ ಅಧಿಕಾರಿಗಳ ತಂಡ ಪುರಸಭಾ ವ್ಯಾಪ್ತಿಯ ಅಂಗಡಿ, ಮಳಿಗೆಗಳಿಗೆ ದಾಳಿ ನಡೆಸಿ, ನಿಷೇತ ಪ್ಲಾಸ್ಟಿಕ್‌ಅನ್ನು ವಶಕ್ಕೆ ಪಡೆದು ಅಂಗಡಿ ಮಾಲಕರಿಂದ ದಂಡ ವಸೂಲಾತಿ ಮಾಡಿತು.

ಪುರಸಭೆಯ ಮುಖ್ಯಾಕಾರಿ ರೇಖಾ ಜೆ ಶೆಟ್ಟಿ, ಸಮುದಾಯ ವ್ಯವಹಾರಗಳ ಅಧಿಕಾರಿ ಮತ್ತಡಿ, ಹಿರಿಯ ಆರೋಗ್ಯ ನಿರೀಕ್ಷಕ ರತ್ನಪ್ರಸಾದ್.ಪಿ, ಮತ್ತು ಸಿಬ್ಬಂದಿಗಳಾದ ಶ್ರೀನಿವಾಸ್ ಹಾಗೂ ಇಕ್ಬಾಲ್ ಪಾಲ್ಗೊಂಡಿದ್ದ ದಾಳಿಯಲ್ಲಿ ಸುಮಾರು 40 ಕೆ.ಜಿ. ನಿಷೇತ ಪ್ಲಾಸ್ಟಿಕ್ ಅನ್ನು ವಶಪಡಿಸಲಾಗಿದ್ದು, ನಾಲ್ಕು ಸಾವಿರ ರೂ. ದಂಡ ವಿಧಿಸಲಾಯಿತು.  ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಕರ್ನಾಟಕ ಸರಕಾರದ ಆದೇಶದಂತೆ, ಪ್ಲಾಸ್ಟಿಕ್ ನಿಷೇಧ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಉದ್ದೇಶಿಸಲಾಗಿದೆ. ಈ ನಿಟ್ಟಿನಲ್ಲಿ ಉದ್ಯಮದಾರರಿಗೆ ಮತ್ತು ಸಾರ್ವಜನಿಕರಿಗೆ ಸಾಕಷ್ಟು ಅರಿವು ಮೂಡಿಸುವ ನಿಟ್ಟಿನಲ್ಲಿ ಇಂಥ ದಾಳಿಯನ್ನು ಸಂಘಟಿಸಲಾಗಿದ್ದು, ಮುಂದಿನ ದಿನಗಳಲ್ಲಿಯೂ ಕಟ್ಟುನಿಟ್ಟಾಗಿ ಸರಕಾರದ ಪ್ಲಾಸ್ಟಿಕ್ ನಿಷೇಧ ಕಾಯಿದೆಯನ್ನು ಅನುಷ್ಠಾನಗೊಳಿಸುವುದು ಎಂದು ಮುಖ್ಯಾಧಿಕಾರಿ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ