ವಿಟ್ಲ

ಮರದ ದಿಮ್ಮಿ ಅಕ್ರಮ ಸಾಗಾಟ, ಪಿಕಪ್ ವಶ

ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದುದನ್ನು ಪತ್ತೆಹಚ್ಚಿರುವ ವಿಟ್ಲ ವಲಯ ಅರಣ್ಯಾಧಿಕಾರಿಗಳು ಪಿಕಪ್ ವಾಹನವನ್ನು ವಶಪಡಿಸಿಕೊಂಡಿದ್ದಾರೆ.

ಜಾಹೀರಾತು

ಕಲ್ಲಡ್ಕವಿಟ್ಲ ಹೆದ್ದಾರಿಯಲ್ಲಿ ಅಕ್ರಮ ಮರ ಸಾಗಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ ವಿಟ್ಲ ಕಸಬಾ ಗ್ರಾಮದ ಮಂಗಿಲಪವು ಎಂಬಲ್ಲಿ ಅರಣ್ಯಾಧಿಕಾರಿಗಳು ಕಾರ್ಯಾಚರಣೆ ನಡೆಸಿ ಪಿಕಪ್ ವಾಹನವನ್ನು ವಶಪಡಿಸಿಕೊಂಡಿದ್ದು, ಚಾಲಕ ವಾಹನವನ್ನು ಬಿಟ್ಟು ಓಡಿ ತಪ್ಪಿಸಿಕೊಂಡಿದ್ದಾನೆ ಎನ್ನಲಾಗಿದೆ. ಮಂಗಳೂರು ವಿಭಾಗ ಉಪ ವಲಯ ಅರಣ್ಯ ಸಂರಕ್ಷಣಾಧಿಕಾರಿ ಕರಿಕಾಳನ್ ರವರ ನಿರ್ದೇಶನದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುಬ್ರಹ್ಮಣ್ಯ ರಾವ್ ಮಾರ್ಗದರ್ಶನದಲ್ಲಿ ಪುತ್ತೂರು ವಲಯ ಅರಣ್ಯಾಧಿಕಾರಿ ವಿ.ಪಿ.ಕಾರ್ಯಪ್ಪರವರು ಪ್ರಕರಣದ ಬಗ್ಗೆ ತನಿಖೆಯನ್ನು ಮುಂದುವರಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ವಿಟ್ಲ ಶಾಖಾ ಉಪ ವಲಯ ಅರಣ್ಯಾಧಿಕಾರಿ ಶಿವಾನಂದ ಆಚಾರ್ಯ, ಅರಣ್ಯ ರಕ್ಷಕ ಮಂಜುನಾಥ್ ಬಿ.ಎಸ್., ಅರಣ್ಯ ವೀಕ್ಷಕ ಎಸ್.ವಿ.ಶೇಖರ್ ಹಾಗೂ ವಾಚರ್ ಪದ್ಮನಾಭ ಪಾಲ್ಗೊಂಡಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts