ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಕರ್ನಾಟಕ ಸರಕಾರದ ಆದೇಶದಂತೆ, ಪ್ಲಾಸ್ಟಿಕ್ ನಿಷೇಧ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಉದ್ದೇಶಿಸಲಾಗಿದ್ದು, ಈ ಕುರಿತು ಒಂದು ಸುತ್ತಿನ ಕಾರ್ಯಾಚರಣೆಯೂ ನಡೆದಿದೆ. ಸೋಮವಾರ ಮತ್ತೊಮ್ಮೆ ಕಾರ್ಯಾಚರಣೆ ನಡೆಸಲು ಉದ್ದೇಶಿಸಲಾಗಿದ್ದು, ಈ ನಿಟ್ಟಿನಲ್ಲಿ ಉದ್ದಿಮೆದಾರರು, ನಿಷೇಧಿತ ಪ್ಲಾಸ್ಟಿಕ್ ಸಾಮಾಗ್ರಿಗಳನ್ನು ಹೊಂದಿರುವುದು ಕಂಡುಬಂದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ನಿಷೇಧಿತ ಪ್ಲಾಸ್ಟಿಕ್ ಸಾಮಾಗ್ರಿಗಳು ಕಂಡುಬಂದಲ್ಲಿ, ಅಂತಹ ಸಾಮಾಗ್ರಿಗಳನ್ನು ಮುಟ್ಟುಗೋಲು ಹಾಕಿಕೊಂಡು, 5 ಸಾವಿರ ರೂ.ವರೆಗೆ ದಂಡ ವಿಧಿಸಲಾಗುವುದು. ಉದ್ದಿಮೆದಾರರು ಇಂತಹ ಪ್ರಕರಣಗಳಿಗೆ ಅವಕಾಶ ನೀಡದೇ, ನಿಷೇಧಿತ ಪ್ಲಾಸ್ಟಿಕ್ ಸಾಮಾಗ್ರಿಗಳನ್ನು ಮಾರಾಟ ಮಾಡದೇ, ಬಳಕೆ ಮಾಡದೇ, ಬಂಟ್ವಾಳ ಪುರಸಭೆಯೊಂದಿಗೆ ಸಹಕರಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Be the first to comment on "ನಿಷೇಧಿತ ಪ್ಲಾಸ್ಟಿಕ್ ಕಂಡುಬಂದರೆ ಕ್ರಮ – ಬಂಟ್ವಾಳ ಪುರಸಭೆ"