ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಕರ್ನಾಟಕ ಸರಕಾರದ ಆದೇಶದಂತೆ, ಪ್ಲಾಸ್ಟಿಕ್ ನಿಷೇಧ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಉದ್ದೇಶಿಸಲಾಗಿದ್ದು, ಈ ಕುರಿತು ಒಂದು ಸುತ್ತಿನ ಕಾರ್ಯಾಚರಣೆಯೂ ನಡೆದಿದೆ. ಸೋಮವಾರ ಮತ್ತೊಮ್ಮೆ ಕಾರ್ಯಾಚರಣೆ ನಡೆಸಲು ಉದ್ದೇಶಿಸಲಾಗಿದ್ದು, ಈ ನಿಟ್ಟಿನಲ್ಲಿ ಉದ್ದಿಮೆದಾರರು, ನಿಷೇಧಿತ ಪ್ಲಾಸ್ಟಿಕ್ ಸಾಮಾಗ್ರಿಗಳನ್ನು ಹೊಂದಿರುವುದು ಕಂಡುಬಂದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ನಿಷೇಧಿತ ಪ್ಲಾಸ್ಟಿಕ್ ಸಾಮಾಗ್ರಿಗಳು ಕಂಡುಬಂದಲ್ಲಿ, ಅಂತಹ ಸಾಮಾಗ್ರಿಗಳನ್ನು ಮುಟ್ಟುಗೋಲು ಹಾಕಿಕೊಂಡು, 5 ಸಾವಿರ ರೂ.ವರೆಗೆ ದಂಡ ವಿಧಿಸಲಾಗುವುದು. ಉದ್ದಿಮೆದಾರರು ಇಂತಹ ಪ್ರಕರಣಗಳಿಗೆ ಅವಕಾಶ ನೀಡದೇ, ನಿಷೇಧಿತ ಪ್ಲಾಸ್ಟಿಕ್ ಸಾಮಾಗ್ರಿಗಳನ್ನು ಮಾರಾಟ ಮಾಡದೇ, ಬಳಕೆ ಮಾಡದೇ, ಬಂಟ್ವಾಳ ಪುರಸಭೆಯೊಂದಿಗೆ ಸಹಕರಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.