ಸರ್ವ ಶಿಕ್ಷಣ ಅಭಿಯಾನದಡಿ ಶಿಕ್ಷಕರ ವೇತನ ವಿಳಂಬವಾಗುತ್ತಿದ್ದು, ಶೀಘ್ರ ಪಾವತಿಗೆ ಅಗತ್ಯ ಕ್ರಮ ಕೈಗೊಳ್ಲುವಂತೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಸೂಚನೆ ನೀಡಿದ್ದಾರೆ.
ಕೇಂದ್ರ ಸರಕಾರದ ಸರ್ವಶಿಕ್ಷಣ ಅಭಿಯಾನ ಯೋಜನೆಯಡಿ, ಬಂಟ್ವಾಳ ತಾಲೂಕಿನ ಹಲವು ಶಾಲೆ ಗಳಲ್ಲಿ ಸೇವೆ ಸಲ್ಲಿಸುತ್ತಿರುವ 132 ಕ್ಕೂ ಹೆಚ್ಚು ಮಂದಿ ಎಸ.ಎಸ್.ಎ.ಶಿಕ್ಷಕರಿಗೆ ಬಂಟ್ವಾಳ ತಾಲೂಕಿಗೆ ಬಿಡುಗಡೆ ಗೊಳ್ಳುವ ಶಿಕ್ಷಕರ ಸಂಬಳದ ಶೀರ್ಷಿಕೆ ಬೆಳ್ತಂಗಡಿ ತಾಲೂಕಿಗೆ ಬದಲಾವಣೆ ಅಗಿರುವುದರಿಂದ ಕಳೆದ ಮಾರ್ಚ ತಿಂಗಳಿನಿಂದ ವೇತನ ಪಾವತಿಯಾಗಿಲ್ಲ. ಹಲವು ಬಾರಿ ಸಂಬಂಧಿಸಿದ ಅಧಿಕಾರಿಗಳಿಗೆ ದೂರು ನೀಡಿದ್ದರೂ ಯಾವುದೇ ಪ್ರಯೋಜನ ವಾಗಿರಲಿಲ್ಲ. ಇದೀಗ ವೇತನ ವಂಚಿತ ಶಿಕ್ಷಕರು ಬಂಟ್ವಾಳ ಶಾಸಕರನ್ನು ಬೇಟಿಯಾಗಿ ಮನವಿ ಸಲ್ಲಿಸಿದ್ದು, ಇದಕ್ಕೆ ಸ್ಪಂದಿಸಿದ ಶಾಸಕ ರಾಜೇಶ್ ನಾಯ್ಕ್ ಶೀಘ್ರ ವೇತನ ಪಾವತಿಗೆ ಅಗತ್ಯ ಕ್ರಮ ಕೈಗೊಳ್ಳಲು ರಾಜ್ಯ ಮಟ್ಟದ ಅಧಿಕಾರಿಗಳಿಗೆ ತಿಳಿಸಿದ್ದಾರೆ ಎಂದು ಶಾಸಕರ ಪ್ರಕಟಣೆ ತಿಳಿಸಿದೆ.