ಶುಕ್ರವಾರ ರಾತ್ರಿ ಬಿ.ಸಿ.ರೋಡಿನ ಬ್ರಹ್ಮಶ್ರಿ ನಾರಾಯಣಗುರು ವೃತ್ತದ ಸಮೀಪ ಹೊಂಡಾ ಆಕ್ಟಿವಾ ಮತ್ತು ಆಕ್ಸೆಸ್ ವಾಹನಗಳೆರಡು ಪರಸ್ಪರ ಡಿಕ್ಕಿಯಾಗಿ ಸವಾರರಿಬ್ಬರು ಗಾಯಗೊಂಡಿದ್ದಾರೆ.
ಸಾಂದರ್ಭಿಕ ಚಿತ್ರ
ಅವರಲ್ಲಿ ಬಿ.ಸಿ.ರೋಡಿನ ಕೈಕುಂಜೆ ನಿವಾಸಿ ಮಂಗಳೂರಿನ ಖಾಸಗಿ ಕಾಲೇಜೊಂದರ ಉಪನ್ಯಾಸಕ ಯಶವಂತ ಆಚಾರ್ಯ ಮಂಗಳೂರಿನ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿದ್ದು, ಅವರ ಎಡಕೆನ್ನೆ, ತಲೆ, ಕೈಕಾಲಿಗೆ ಗಂಭೀರ ಗಾಯಗಳಾಗಿವೆ.
ಇನ್ನೋರ್ವ ಗಾಯಾಳು ರಿಚರ್ಡ್ ಕೊರೆಯ ಅವರೂ ಗಾಯಗಳೊಂದಿಗೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಪ್ರಕರಣ ದಾಖಲಿಸಿಕೊಂಡ ಬಂಟ್ವಾಳ ಸಂಚಾರಿ ಪೊಲೀಸ್ ಠಾಣಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಜಾಹೀರಾತು
ಬಿ.ಸಿ.ರೋಡ್ ನಿಂದ ಬಂಟ್ವಾಳ ಪೇಟೆಯ ಕಡೆಗೆ ಯಶವಂತ ಆಚಾರ್ಯ ಅವರು ತಮ್ಮ ವಾಹನದಲ್ಲಿ ಸಾಗುತ್ತಿದ್ದ ಸಂದರ್ಭ, ಬೆಳ್ತಂಗಡಿ ಕಡೆಯಿಂದ ರಿಚರ್ಡ್ ಕೊರೆಯ ಅವರ ಸ್ಕೂಟರ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿತು ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ನಡೆದ ಕೂಡಲೇ ಸ್ಥಳೀಯರು 108 ಆಂಬುಲೆನ್ಸ್‌ನಲ್ಲಿ ಗಾಯಾಳುಗಳನ್ನು ಸಾಗಿಸಿದರು. ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಎದುರು ಪಾರ್ಕ್ ಬಳಿ ಈ ಘಟನೆ ನಡೆದಿದ್ದು, ಇದೊಂದು ಅಪಾಯಕಾರಿ ಜಾಗವಾಗಿ ಪರಿಣಮಿಸಿದೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಬಿ.ಸಿ.ರೋಡ್ ಸರ್ಕಲ್ ನಲ್ಲಿ ಅಪಘಾತ: ಗಂಭೀರ ಸ್ಥಿತಿಯಲ್ಲಿ ಗಾಯಾಳು ಆಸ್ಪತ್ರೆಗೆ ದಾಖಲು"
Be the first to comment on "ಬಿ.ಸಿ.ರೋಡ್ ಸರ್ಕಲ್ ನಲ್ಲಿ ಅಪಘಾತ: ಗಂಭೀರ ಸ್ಥಿತಿಯಲ್ಲಿ ಗಾಯಾಳು ಆಸ್ಪತ್ರೆಗೆ ದಾಖಲು"