ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರ ಜೂನ್ 19ರ ಪ್ರವಾಸ ವಿವರ ಹೀಗಿದೆ. ಬೆಳಗ್ಗೆ 10ಕ್ಕೆ ಬಡಗಬೆಳ್ಳೂರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವಿಸ್ತೃತಕಟ್ಟಡ ಹಾಗೂ ಸಾಂದ್ರಶೀತಲೀಕರಣ ಘಟಕದ ಉದ್ಘಾಟನೆ, ಸಂಘದ ದಶಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವುದು. 11.30ಕ್ಕೆ ಬಂಟ್ವಾಳ ಪುರಸಭೆ ಸಾಮಾನ್ಯ ಸಭೆ. ಮಧ್ಯಾಹ್ನ 1.30 ಕ್ಕೆ ದ.ಕ.ಜಿಪಂ ಸಭಾಂಗಣದಲ್ಲಿ ಲೋಕೋಪಯೋಗಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ. ಮಧ್ಯಾಹ್ನ 3,30ಕ್ಕೆ ಕಡೇಶಿವಾಲಯ ಗ್ರಾ.ಪಂ ವ್ಯಾಪ್ತಿಯ ಫಲಾನುಭವಿಗಳಿಗೆ 94ಸಿ ಹಕ್ಕುಪತ್ರ ವಿತರಣಾ ಕಾರ್ಯಕ್ರಮ, ಮತ್ತು ಸಂಜೆ 6ಕ್ಕೆ ಮಂಚಿಯಲ್ಲಿ ಕಾರ್ಯಕರ್ತರ ಅಭಿನಂದನಾ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಶಾಸಕರ ಪತ್ರಿಕಾ ಪ್ರಕಟಣೆ ತಿಳಿಸಿದೆ.