ಸರಕಾರದ ಯೋಜನೆಯನ್ನು ತ್ವರಿತಗತಿಯಲ್ಲಿ ಮಾಹಿತಿ ನೀಡಿ, ಪ್ರಗತಿಯಲ್ಲಿ ಸಹಕರಿಸಿ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದರು.
ಬರಿಮಾರು ಗ್ರಾಮಗಳ ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣಾ ಸಮಾರಂಭ ಕಡೇಶಿವಾಲಯದ ದ.ಕ.ಜಿ.ಪಂ.ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
32 ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಿ ಮಾತನಾಡಿದ ಶಾಸಕರು, ಸರಕಾರದ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ನೀಡಿ, ತ್ವರಿತಗತಿಯಲ್ಲಿ ಯೋಜನೆಗಳನ್ನು ಜನರಿಗೆ ತಲುಪಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಗೋಳ್ತಮಜಲು ಜಿಲ್ಲಾ ಪಂಚಾಯತ್ ಸದಸ್ಯೆ ಕಮಲಾಕ್ಷಿ ಕೆ. ಪೂಜಾರಿ ಮುಂದಿನ ದಿನಗಳಲ್ಲಿ ಶಾಸಕರ ಜೊತೆಗೂಡಿ ಗ್ರಾಮದ ಸಮಗ್ರ ಅಭಿವೃದ್ಧಿಗೆ ನೆರವಾಗುದಾಗಿ ಭರವಸೆಯಿತ್ತರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಕಡೇಶಿವಾಲಯ ಗ್ರಾಮ ಪಂಚಾಯತ್ ಸದಸ್ಯೆ ಶ್ಯಾಮಲಾ ಶೆಟ್ಟಿ ಚಿನ್ನಯಕಟ್ಟೆ, ಗ್ರಾಮಸ್ಥರ ಪರವಾಗಿ ಅಭಿನಂದನೆಯನ್ನು ಸಲ್ಲಿಸಿದರು.
ಕಡೇಶಿವಾಲಯ ಗ್ರಾಮಸ್ಥರ ಬಹುಕಾಲದ ಬೇಡಿಕೆಯಾಗಿದ್ದ ಮುಖ್ಯರಸ್ತೆ ದುರಸ್ತಿಯ ವಿಚಾರವಾಗಿ ತಕ್ಷಣವೇ ಸ್ಪಂದಿಸಿದ ಶಾಸಕರು, ಆದಷ್ಟು ಬೇಗ ಕೆಲಸ ಆರಂಭಿಸಲು ಸೂಚಿಸಿದರು.
ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸುರೇಂದ್ರ ರಾವ್, ವ್ಯ.ಸೇ.ಸ.ಬ್ಯಾಂಕ್ ಅಧ್ಯಕ್ಷರಾದ ವಿದ್ಯಾಧರ ರೈ ಪೆರ್ಲಾಪು, ಗ್ರಾಮಕರಣಿಕರಾದ ಬಸಪ್ಪ, ಪಂಚಾಯತ್ ಸದಸ್ಯರಾದ ಸನತ್ ಆಳ್ವ, ಸುರೇಶ್ ಪೂಜಾರಿ ಕನ್ನೊಟ್ಟು, ಸುರೇಶ್ ಬನಾರಿ, ಹರಿಶ್ಚಂದ್ರ ಕಾಡಬೆಟ್ಟು, ಸರೋಜ, ಸೇಸಮ್ಮ, ಲಲಿತಾ ಮುಂತಾದವರು ಉಪಸ್ಥಿತರಿದ್ದರು.