ದಕ್ಷಿಣ ಕನ್ನಡ ಜಿಲ್ಲೆಯ ಪ್ರಥಮ ಅಟಲ್ ಥಿಂಕರಿಂಗ್ ಲ್ಯಾಬ್ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಜೂ25ರಂದು ಉದ್ಘಾಟನೆಗೊಳ್ಳಲಿದೆ.
ಭಾರತೀಯ ಬಾಹ್ಯಾಖಾಶ ಸಂಶೋಧನಾ ಸಂಸ್ಥೆ ಇಸ್ರೋ ದ ಪೂರ್ವಾಧ್ಯಕ್ಷ ಎ.ಎಸ್.ಕಿರಣ್ ಕುಮಾರ್ ಉದ್ಘಾಟಿಸಲಿದ್ದಾರೆ. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾಂಗ ಉಪನಿರ್ದೇಶಕ ವೈ.ಶಿವರಾಮಯ್ಯ , ಶ್ರೀರಾಮ ವಿದ್ಯಾಕೇಂದ್ರದ ಅಧ್ಯಕ್ಷ ಬಿ.ನಾರಾಯಣ ಸೋಮಯಾಜಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಇದೇ ಸಂದರ್ಭ 6-10 ನೇ ತರಗತಿ ವಯೋಮಾನದ ವಿದ್ಯಾರ್ಥಿಗಳ ಜೊತೆ ವಿದ್ಯಾರ್ಥಿ -ವಿಜ್ಞಾನಿ ಸಂವಾದ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕ ವಸಂತ ಮಾಧವ ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ನೀತಿ ಆಯೋಗದ ಅಟಲ್ ಇನೋವೇಷನ್ ಮಿಷನ್ ಯೋಜನೆ ಅಡಿಯಲ್ಲಿ ಈ ಲ್ಯಾಬ್ ಸ್ಥಾಪನೆಯಾಗಲಿದ್ದು, ಶಾಲೆಯ ಮೂಲಸೌಕರ್ಯ, ವೈಜ್ಞಾನಿಕ ಚಟುವಟಿಕೆಗಳು ಹಾಗೂ ಹಿನ್ನೆಲೆಯ ಆಧಾರದಲ್ಲಿ ಶ್ರೀರಾಮ ವಿದ್ಯಾಕೇಂದ್ರವನ್ನು ಆಯ್ಕೆ ಮಾಡಿದೆ.
ಉದ್ಘಾಟನೆಗೊಂಡ ಬಳಿಕ ವಾರದ ಆರು ದಿನಗಳಲ್ಲಿ ಪ್ರತಿದಿನ ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ದಿನದಲ್ಲಿ 8 ಗಂಟೆಗಳ ಕಾಲ ಈ ಲ್ಯಾಬ್ ಕಾರ್ಯನಿರ್ವಹಿಸಲಿದ್ದು, ತಾಲೂಕಿನ ಯಾವುದೇ ಶಾಲೆಯ ವಿದ್ಯಾರ್ಥಿಗಳಿಗೆ(6-12 ತರಗತಿ)ಈ ಪ್ರಯೋಗಾಲಯ ವಿಜ್ಞಾನದ ಕೆಲಸಗಳಿಗೆ ಒದಗಿಬರಲಿದೆ.
Be the first to comment on "ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರಕ್ಕೆ ಅಟಲ್ ಥಿಂಕರಿಂಗ್ ಲ್ಯಾಬ್, 25ರಂದು ಉದ್ಘಾಟನೆ"