ಮಣ್ಣಿನ ಗುಣವನ್ನು ತಮ್ಮ ಮಕ್ಕಳಿಗೆ ತಿಳಿಸುವ ಮೂಲಕ ನಮ್ಮ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ವಿಸ್ತರಿಸುವ ಕೆಲಸಗಳು ನಡೆಯಬೇಕು. ತುಳುನಾಡಿನ ಸಂಸ್ಕೃತಿಯನ್ನು ಉಳಿಸುವ ಕಾರ್ಯ ನಡೆಯಬೇಕು ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು.
ಭಾನುವಾರ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಒಡಿಯೂರು ಶ್ರೀಗಳ ಜನ್ಮದಿನೋತ್ಸವ ಸಮಿತಿ ವತಿಯಿಂದ ಶ್ರೀಗಳ ಜನ್ಮದಿನೋತ್ಸವ-ಗ್ರಾಮೋತ್ಸವ ಪ್ರಯುಕ್ತ ಸಂಸ್ಥಾನದ ಕೃಷಿಭೂಮಿಯಲ್ಲಿ ನಡೆದ ಕೆಸರ್‌ಡೊಂಜಿ ದಿನ ಹಾಗೂ ಕೆಸರುಗದ್ದೆ ಆಟೋಟ ಸ್ಪರ್ಧೆಗಳನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು. ಸಾಧ್ವೀ ಮಾತಾನಂದ ಮಯೀ ಉಪಸ್ಥಿತರಿದ್ದರು.
ಜನ್ಮದಿನೋತ್ಸವ ಸಮಿತಿ ಅಧ್ಯಕ್ಷ ಲೋಕನಾಥ ಶೆಟ್ಟಿ, ಕೋಶಾಧಿಕಾರಿ ಚಂದ್ರಶೇಖರ ಬಿ.ಕೆ, ಗ್ರಾಮೋತ್ಸವ ಸಮಿತಿಯ ಮಾಜಿ ಅಧ್ಯಕ್ಷ ಎಚ್.ಕೆ ಪುರುಷೋತ್ತಮ, ಮಾಜಿ ಕೋಶಾಧಿಕಾರಿ ಜಯಂತ್ ಕೋಟ್ಯಾನ್, ನಿಕಟಪೂರ್ವ ಸಂಚಾಲಕ ಅಶೋಕ್ ಕುಮಾರ್ ರೈ ಬಿಜೈ, ಒಡಿಯೂರು ಮಹಿಳಾ ವಿಕಾಸ ಕೇಂದ್ರ ಅಧ್ಯಕ್ಷೆ ಸರ್ವಾಣಿ ಪಿ ಶೆಟ್ಟಿ, ಒಡಿಯೂರು ವಿವಿದೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸುರೇಶ್ ರೈ, ಕ್ರೀಡಾ ಸಮಿತಿ ಸಂಚಾಲಕ ಸದಾಶಿವ ಶೆಟ್ಟಿ, ಬನಾರಿ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಅಧ್ಯಕ್ಷ ಲಿಂಗಪ್ಪ ಗೌಡ ಪನೆಯಡ್ಕ ಉಪಸ್ಥಿತರಿದ್ದರು.
ಗ್ರಾಮಾಭಿವೃದ್ಧಿ ಯೋಜನೆ ಪ್ರಧಾನ ಸಂಚಾಲಕ ಟಿ ತಾರಾನಾಥ ಕೊಟ್ಟಾರಿ ಸ್ವಾಗತಿಸಿದರು. ಗ್ರಾಮೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಸದಾಶಿವ ಅಳಿಕೆ ನಿರೂಪಿಸಿದರು. ಒಡಿಯೂರು ವಿದ್ಯಾ ಪೀಠದ ಮುಖ್ಯ ಶಿಕ್ಷಕ ಜಯಪ್ರಕಾಶ್ ವಂದಿಸಿದರು.