ಬಂಟ್ವಾಳ ತಾಲೂಕಿನ ಇರ್ವತ್ತೂರು ಗ್ರಾ.ಪಂನಲ್ಲಿ ತೆರವಾಗಿದ್ದ ಸ್ಥಾನಕ್ಕೆ ನಡೆದಿದ್ದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಸುಧೀಂದ್ರ ಶೆಟ್ಟಿ ಚುನಾಯಿತರಾದ ಹಿನ್ನೆಲೆಯಲ್ಲಿ ಅವರನ್ನು ಬಂಗೇರಕೆರೆ ಎಂಬಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಅಭಿನಂದಿಸಲಾಯಿತು.
ಇರ್ವತ್ತೂರು ಗ್ರಾಮ ಪಂಚಾಯತ್‌ನ ಮೂಡುಪಡುಕೋಡಿ 1ನೇ ಕ್ಷೇತ್ರದ ತೆರವಾದ ಒಂದು ಸ್ಥಾನಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸುಧೀಂದ್ರ ಶೆಟ್ಟಿ 391 ಮತ ಗಳಿಸಿದ್ದು, ಬಿಜೆಪಿ ಬೆಂಬಲಿತ ಅಭ್ಯರ್ಥಿ ಜನಾರ್ದನ ಶೆಟ್ಟಿ 302 ಮತ ಪಡೆದಿದ್ದರು. ಕಾಂಗ್ರೆಸ್ ಬೆಂಬಲಿತ ಸುಧೀಂದ್ರ ಶೆಟ್ಟಿ ಗೆಲುವಿನ ಹಿನ್ನೆಲೆಯಲ್ಲಿ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಸಚಿವ ರಮಾನಾಥ ರೈ, ವಿಧಾನಸಭೆಯಲ್ಲಿ ಕಾಂಗ್ರೆಸ್ ಗೆ ಉಂಟಾದ ಸೊಲನ್ನು ಸವಾಲಾಗಿ ಸ್ವೀಕರಿಸಿ ಮುನ್ನಡೆಯೋಣ, ಅಭಿವೃದ್ಧಿ ಕಾರ್ಯಕ್ರಮಗಳು ಮುಂದುವರಿಯಲಿದೆ ಎಂದು ಹೇಳಿದರು. ಈ ಸಂದರ್ಭ ಜಿಲ್ಲಾ ಪಂಚಾಯಿತಿ ಸದಸ್ಯ ಬಿ.ಪದ್ಮಶೇಖರ ಜೈನ್, ಜಿಲ್ಲಾ ಉಪಾಧ್ಯಕ್ಷ ಬೇಬಿ ಕುಂದರ್, ಬ್ಲಾಕ್ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್, ಪ್ರಮುಖರಾದ ಪ್ರಶಾಂತ್ ಕೋಟ್ಯಾನ್, ಹಮೀದ್, ಇಕ್ಬಾಲ್ ಮದ್ದ, ಚಂದ್ರಶೇಖರ್ ಮತ್ತಿತರರು ಉಪಸ್ಥಿತರಿದ್ದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…