ಬಂಟ್ವಾಳ

29ರಂದು ರೋಟರಿ ಕ್ಲಬ್ ಬಂಟ್ವಾಳ ಪದಪ್ರದಾನ ಸಮಾರಂಭ


ರೋಟರಿ ಕ್ಲಬ್ ಬಂಟ್ವಾಳ ಇದರ ನೂತನ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಪದಪ್ರದಾನ ಸಮಾರಂಭ ಹಾಗೂ ಸುವರ್ಣ ವರ್ಷಾಚರಣೆಯ ಉದ್ಘಾಟನಾ ಸಮಾರಂಭ ಜೂ.29ರಂದು ಶುಕ್ರವಾರ ಸಂಜೆ 7 ಗಂಟೆಗೆ ಬಿ.ಸಿ.ರೋಡಿನ ರೋಟರಿ ಬಿ.ಎ. ಸೋಮಾಯಾಜಿ ಮೆಮೋರಿಯಲ್ ಹಾಲ್‌ನಲ್ಲಿ ನಡೆಯಲಿದೆ ಎಂದು ರೋಟರಿ ಕ್ಲಬ್ ನಿಯೋಜಿತ ಅಧ್ಯಕ್ಷ ಮಂಜುನಾಥ ಆಚಾರ್ಯ ತಿಳಿಸಿದ್ದಾರೆ.

ಬಿ.ಸಿ.ರೋಡಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು 3182 ರೋಟರಿ ಜಿಲ್ಲೆಯ 2018-19ನೇ ಸಾಲಿನ ಚುನಾಯಿತ ಜಿಲ್ಲಾ ಗವರ್ನರ್ ಅಭಿನಂದನ್ ಶೆಟ್ಟಿ ನೂತನ ಪದಾಧಿಕಾರಿಗಳಿಗೆ ಪದಗ್ರಹಣ ನೆರವೇರಿಸಲಿದ್ದಾರೆ, ಮಂಗಳೂರು ಗಣೇಶ್ ಬೀಡಿ ಇದರ ಆಡಳಿತ ಪಾಲುದಾರ ಜಗನ್ನಾಥ ಶೆಣೈ ಬಂಟ್ವಾಳ ರೋಟರಿ ಕ್ಲಬ್‌ನ ಸುವರ್ಣ ವರ್ಷಾಚರಣೆಯನ್ನು ಉದ್ಘಾಟಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ವಲಯ-4ರ ಸಹಾಯಕ ಗವರ್ನರ್ ಪ್ರಕಾಶ್ ಕಾರಂತ, ವಲಯ ಲೆಫ್ಟಿನೆಂಟ್ ಬಿ. ಸಂಜೀವ ಪೂಜಾರಿ ಭಾಗವಹಿಸಲಿದ್ದಾರೆ. ನೂತನ ಅಧ್ಯಕ್ಷರಾಗಿ ಮಂಜುನಾಥ ಆಚಾರ್ಯ, ಕಾರ್ಯದರ್ಶಿಯಾಗಿ ಶಿವಾನಿ ಬಾಳಿಗ, ಕೋಶಾಧಿಕಾರಿಯಾಗಿ ವಲ್ಲಭೇಶ್ ಶೆಣೈ ಮತ್ತಿತರರ ಪದಾಧಿಕಾರಿಗಳು ಈ ಸಂದರ್ಭ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ತಿಳಿಸಿದರು.

ಜಾಹೀರಾತು

ಬಂಟ್ವಾಳ ರೋಟರಿ ಕ್ಲಬ್ 50ನೇ ವರ್ಷವನ್ನು ಪೂರೈಸುತ್ತಿರುವ ಹಿನ್ನಲೆಯಲ್ಲಿ ರೋಟರಿ ಕ್ಲಬ್‌ನ ಎಲ್ಲಾ ಸದಸ್ಯರ ಸಹಕಾರದೊಂದಿಗೆ ಈ ವರ್ಷವನ್ನು ಸ್ಮರಣೀಯವಾಗಿಸಲು ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸಿಲು ತೀರ್ಮಾನಿಸಲಾಗಿದೆ. ಕಳೆದ 49 ವರ್ಷಗಳಲ್ಲಿ ಬಂಟ್ವಾಳ ರೋಟರಿ ಕ್ಲಬ್ ಹಲವಾರು ಜನೋಪಯೋಗಿ ಹಾಗೂ ಸಮಾಜಮುಖಿ ಕೆಲಸಗಳನ್ನು ಬಂಟ್ವಾಳ ತಾಲೂಕು ವ್ಯಾಪ್ತಿಯಲ್ಲಿ ಅನುಷ್ಠಾನಗೊಳಿಸಿದ್ದು ಅದೇ ಸ್ಫೂರ್ತಿಯಿಂದ ಈ ಸುವರ್ಣ ವರ್ಷಾಚರಣೆಯ ಸಂದರ್ಭದಲ್ಲೂ ಅನೇಕ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕೆಂಬ ಆಶಯ ಇದೆ ಎಂದರು.

ಸುದ್ದಿಗೋಷ್ಟಿಯಲ್ಲಿ ನಿಯೋಜಿತ ಕಾರ್ಯದರ್ಶಿ ಶಿವಾನಿ ಬಾಳಿಗ, 2017-18ನೇ ಸಾಲಿನ ಅಧ್ಯಕ್ಷ ಬಿ. ಸಂಜೀವ ಪೂಜಾರಿ, ಕಾರ್ಯದರ್ಶಿ ನಾರಾಯಣ ಹೆಗ್ಡೆ, ಸಹಾಯಕ ಗವರ್ನರ್ ಪ್ರಕಾಶ್ ಕಾರಂತ್, ಪ್ರಕಾಶ್ ಬಾಳಿಗಾ, ಪ್ರಭಾಕರ ಪ್ರಭು ಹಾಜರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

3 hours ago