ದಕ್ಷಿಣಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟಕ್ಕೆ ಸಂಯೋಜನೆ ಗೊಂಡಿರುವ ಬಂಟ್ವಾಳ ತಾಲೂಕಿನ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿಗಳ ಸಮಾಲೋಚನಾ ಸಭೆ ಅಧ್ಯಕ್ಷರಾದ ರವಿರಾಜ ಹೆಗ್ಡೆ ಅಧ್ಯಕ್ಷತೆಯಲ್ಲಿ ಬ್ರಹ್ಮಶ್ರೀ ನಾರಾಯಣಗುರು ಸಭಾಭವನ ಗಾಣದಪಡ್ಪು ಬಿಸಿ ರೋಡ್ ನಲ್ಲಿ ನಡೆಯಿತು.
ಕಾರ್ಯನಿರ್ವಾಹಕ ನಿರ್ದೇಶಕ ಡಾ. ಬಿ. ಯು. ಸತ್ಯನಾರಾಯಣ, ನಿರ್ದೇಶಕ ಸುಚರಿತ ಶೆಟ್ಟಿ, ಮಹಿಳಾ ವಿಭಾಗದ ನಿರ್ದೇಶಕಿ ವೀಣಾ ರೈ, ಒಕ್ಕೂಟದ ಶೇಖರಣಾ ವಿಭಾಗದ ವ್ಯವಸ್ಥಾಪಕ ಡಾ. ನಿತ್ಯಾನಂದ ಭಕ್ತ, ದ.ಕ.ಹಾಲು ಒಕ್ಕೂಟದ ಡೈರಿ ವಿಭಾಗದ ವ್ಯವಸ್ಥಾಪಕ ಶಿವಶಂಕರ್ ಸ್ವಾಮಿ ಉಪಸ್ಥಿತರಿದ್ದರು. ಈ ಸಂದರ್ಭ ಬಂಟ್ವಾಳ ತಾಲೂಕಿನ ಉತ್ತಮ ಸಂಘಗಳಿಗೆ ಪ್ರಶಸ್ತಿ ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಹೈನುಗಾರರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡುವ ಕಾರ್ಯಕ್ರಮ ನಡೆಯಿತು. ಒಕ್ಕೂಟದ ನಿರ್ದೇಶಕ ಡಾ. ಕೃಷ್ಣ ಭಟ್ ಸ್ವಾಗತಿಸಿದರು. ಒಕ್ಕೂಟದ ವಿಸ್ತರಣಾಧಿಕಾರಿ ಜಾನೆಟ್ ರೋಸಾರಿಯೋ ವಂದಿಸಿದರು. ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ವಿಸ್ತರಣಾಧಿಕಾರಿ ಜಗದೀಶ .ಎ. ಕಾರ್ಯಕ್ರಮ ನಿರೂಪಿಸಿದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…