ಹೈಕಮಾಂಡ್ ಅವಕಾಶ ನೀಡಿದರೆ, ಮುಂಬರುವ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಸಿದ್ಧನಿದ್ದೇನೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.
ಬಿ.ಸಿ.ರೋಡಿನಲ್ಲಿರುವ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿದ್ದು, ಹೈಕಮಾಂಡ್ ನಿರ್ಧಾರಕ್ಕೆ ಬದ್ಧನಾಗಿದ್ದೇನೆ. ಪಕ್ಷವು ಈಗಾಗಲೇ ಪಾರ್ಲಿಮೆಂಟ್ ಚುನಾವಣೆಗೆ ಸಿದ್ಧವಾಗುತ್ತಿದ್ದು, ಟಿಕೆಟ್ ನೀಡಿದರೆ ಸ್ಪರ್ಧಿಸುತ್ತೇನೆ ಎಂದು ಹೇಳಿದರು.
ಇದರೊಂದಿಗೆ ೨೦೧೯ರ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯಲ್ಲಿ ರಮಾನಾಥ ರೈ ಹೆಸರು ಸೇರ್ಪಡೆ ಆದಂತಾಗಿದೆ. ಕಳೆದ ಬಾರಿ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಲೋಕಸಭೆಗೆ ಸ್ಪರ್ಧಿಸಿದ್ದು, ಬಿಜೆಪಿಯ ನಳಿನ್ ಕುಮಾರ್ ಕಟೀಲ್ ವಿರುದ್ಧ ಸೋಲು ಅನುಭವಿಸಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಅವಕಾಶ ನೀಡಿದರೆ ಲೋಕಸಭೆಗೆ ಸ್ಪರ್ಧೆ: ರಮಾನಾಥ ರೈ"