ಬಂಟ್ವಾಳ

ಶಾಸಕ ಪ್ರಯತ್ನದಂತೆ ಅಟಲ್ ಜನಸ್ನೇಹಿ ಕೇಂದ್ರ ಸ್ಥಳಾಂತರ

ತಾಲೂಕಿನ ಕೇಂದ್ರಭಾಗವಾದ ಬಿ.ಸಿ.ರೋಡಿನ ಹಳೇ ರಂಗಮಂದಿರದಲ್ಲಿ ಸೋರುವ ಕಟ್ಟಡಲ್ಲಿದ್ದ ಅಟಲ್ ಜಿ ಜನಸ್ನೇಹಿ ಕೇಂದ್ರ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಪ್ರಯತ್ನದ ಫಲವಾಗಿ ಸ್ಥಳಾಂತರಗೊಂಡಿದೆ ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ.

ಜಾಹೀರಾತು

ಬಂಟ್ವಾಳ ತಾಲೂಕು ಕಚೇರಿ ನಿರ್ಮಾಣ ಮಾಡುವ ಸಮಯ ಅಟಲ್ ಜೀ ಜನಸ್ನೇಹಿ ಕೇಂದ್ರವನ್ನು ತಾತ್ಕಾಲಿಕವಾಗಿ ಹತ್ತಿರದ ಹಳೆ ರಂಗ ಮಂದಿರ ಕಟ್ಟಡಕ್ಕೆ ಸ್ಥಳಾಂತರಗೊಳಿಸಲಾಗಿತ್ತು. ತದನಂತರ ಮಿನಿ ವಿಧಾನ ಸೌಧ ನಿರ್ಮಾಣಗೊಂಡು ಉದ್ಫಾಟನೆಗೊಂಡು ನಂತರ ಎಲ್ಲಾ ಕಚೇರಿಗಳು ಹೊಸ ಮಿನಿ ವಿಧಾನ ಸೌಧದಲ್ಲಿ ಕಾರ್‍ಯಾರಂಭಗೊಂಡರೂ ಸಹ ತಿಂಗಳುಗಟ್ಟಲೇ ಅಟಲ್ ಜೀ ಜನಸ್ನೇಹಿ ಕೇಂದ್ರ ಮಾತ್ರ ಹೊಸ ಕಟ್ಟಡಕ್ಕೆ ಸ್ಥಳಾಂತರಹೊಳ್ಳಲಿಲ್ಲ. ಇದರಿಂದ ಈ ವರ್ಷದ ಆರಂಭದಲ್ಲಿ ಬಂದ ಗಾಳಿ ಮನೆಗೆ ಹಳೆ ರಂಗ ಮಂದಿರ ಸೋರಿ ನೀರು ಬಿದ್ದು ಕಡತ, ಆಧಾರ್ ಕೇಂದ್ರದ ಕಂಪ್ಯೂಟರ್ ಹಾಳಾಗಿದ್ದವು. ಈ ಹಿನ್ನಲೆಯಲ್ಲಿ ಅಟಲ್ ಜೀ ಜನಸ್ನೇಹಿ ಕೇಂದ್ರವನ್ನು ತಕ್ಷಣ ಮಿನಿ ವಿಧಾನ ಸೌಧಕ್ಕೆ ಸ್ಥಳಾಂತರಿಸುವಂತೆ ತಾ.ಪಂ.ಸದಸ್ಯ ಪ್ರಭಾಕರ ಪ್ರಭು, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರಿಗೆ ಮನವಿ ಸಲ್ಲಿಸಿದ್ದರು. ಮನವಿಗೆ ಸ್ಪಂದಿಸಿದ  ಶಾಸಕರು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಶೀಘ್ರ ಸ್ಥಳಾಂತರಿಸಲು ಸೂಚನೆ ನೀಡಿದ್ದರು. ಇದೀಗ ಜಿಲ್ಲಾಧಿಕಾರಿ ಸೂಚನೆಯಂತೆ ಅಟಲ್ ಜೀ ಜನಸ್ನೇಹಿ ಕೇಂದ್ರ ಮಿನಿ ವಿಧಾನ ಸೌಧ ಕಟ್ಟಡದೊಳಗೆ ಸ್ಥಳಾಂತರಗೊಂಡಿರುವುದಾಗಿ ಶಾಸಕರ ಕಚೇರಿ ಪ್ರಕಟಣೆಯಲ್ಲಿ ವಿವರಿಸಲಾಗಿದೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts