ಮುಡಿಪು ಬ್ಲಾಕ್ ಕಾಂಗ್ರೆಸ್ ವತಿಯಿಂದ 30ನೇ ಶನಿವಾರ ಬೆಳಿಗ್ಗೆ ಗಂಟೆ 11 ಕ್ಕೆ ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಸತತ 4 ಭಾರಿ ವಿಜಯಿಯಾಗಿ ಸಮ್ಮಿಶ್ರ ಸರಕಾರದಲ್ಲಿ ನಗರಾಭಿವೃದ್ಧಿ ಹಾಗೂ ವಸತಿ ಸಚಿವಾರಾಗಿ ಆಯ್ಕೆಯಾದ ಯು.ಟಿ.ಖಾದರ್ ಹಾಗೂ ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ವಿಧಾನಪರಿಷತ್ ಗೆ ಆಯ್ಕೆಯಾದ ಹರೀಶ್ ಕುಮಾರ್ ರವರಿಗೆ ಸನ್ಮಾನ ಹಾಗೂ ಪಕ್ಷಕ್ಕಾಗಿ ಅಹರ್ನಿಶಿ ದುಡಿದ ಪಕ್ಷದ ಕಾರ್ಯಕರ್ತರಿಗೆ ಕೃತಜ್ಞತೆ ಕಾರ್ಯಕ್ರಮ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಪಕ್ಷದ ಹಿರಿಯ ನಾಯಕರು ಹಾಗೂ ಊರಿನ ಸಾಮಾಜಿಕ ಧಾರ್ಮಿಕ ಹಾಗೂ ಶೈಕ್ಷಣಿಕ ನೇತಾರರು ಭಾಗವಹಿಸಲಿದ್ದಾರೆ. ಸಾರವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಬ್ಲಾಕ್ ಅಧ್ಯಕ್ಷರಾದ ಪ್ರಶಾಂತ್ ಕಾಜವ ಪತ್ರಿಕಾ ಪ್ರಕಟನೆಯಲ್ಲಿ ವಿನಂತಿಸಿದ್ದಾರೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…