ದ.ಕ.ಜಿ.ಪಂ.ಹಿ.ಪ್ರಾ. ಶಾಲೆ ಕೊಡಂಗೆಯಲ್ಲಿ ೧ನೇ ತರಗತಿಯಲ್ಲಿ ದಾಖಲಾದ ಎಲ್ಲಾ ವಿದ್ಯಾರ್ಥಿಗಳಿಗೆ ಶಾಲಾಭಿವೃಧ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ಹಾಗೂ ಶಾಲಾಭಿಮಾನಿಗಳಾದ ಅಬ್ದುಲ್ ಬಾಸಿತ್ ರವರ ಸಹಕಾರದಿಂದ ಉಚಿತ ಬ್ಯಾಗ್, ನೋಟ್ ಪುಸ್ತಕ ವಿತರಣೆ ಮಾಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ.ಅಧ್ಯಕ್ಷ ಸಿ.ಎಂ. ಇಸ್ಮಾಯಿಲ್ ವಹಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಗೂಡಿನಬಳಿ ಸರಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಅಬ್ದುಲ್ ರಝಾಕ್ ಅನಂತಾಡಿ, ಗೂಡಿನಬಳಿ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ನೌಶೀನ ಮಾತನಾಡಿ ವಿದ್ಯಾರ್ಥಿಗಳ ಬಗ್ಗೆ ಪೋಷಕರ ಜವಾಬ್ದಾರಿ ಬಗ್ಗೆ ವಿಷಯ ಮಂಡಿಸಿದರು. ಈ ಸಂದರ್ಭದಲ್ಲಿ ಜವಾನ್ ಫ್ರೆಂಡ್ಸ್ (ರಿ.) ಅಧ್ಯಕ್ಷ ರಿಯಾಝ್ ಜವಾನ್ ಉಪಸ್ಥಿತರಿದ್ದರು.
ಸನ್ಮಾನ ಕಾರ್ಯಕ್ರಮ: ಕಳೆದ ಏಳು ವರ್ಷಗಳಿಂದ ಶಾಲಾಭಿವೃಧ್ಧಿ ಹಾಗೂ ಮೇಲುಸ್ತುವಾರಿ ಸಮಿತಿಯ ಉಪಾಧ್ಯಕ್ಷೆಯಾಗಿ ಕೆಲಸ ನಿರ್ವಹಿಸಿದ ನೆಬಿಸಾ ಅವರನ್ನು ಸನ್ಮಾನಿಸಲಾಯಿತು. ಶಾಲಾ ಮುಖ್ಯೋಪಾದ್ಯಾಯಿನಿ ಸೋನಿತಾ ಕೆ. ಸ್ವಾಗತಿಸಿದರು. ಶಿಕ್ಷಕಿ ವೀಣಾ ಪಿಂಟೊ ಕಾರ್ಯಕ್ರಮ ನಿರೂಪಿಸಿದರು ಶಿಕ್ಷಕಿ ಶಶಿಕಲಾ ಕೆ.ಎನ್. ವಂದಿಸಿದರು.
Be the first to comment on "ಕೊಡಂಗೆ: ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್, ನೋಟ್ ಬುಕ್ ವಿತರಣೆ"