ಬಾಲ್ಯದಲ್ಲೇ ಕಣ್ಣಿನ ಆರೈಕೆ ಮಾಡುವ ಬಗ್ಗೆ ಮಕ್ಕಳಿಗೆ ಸೂಕ್ತ ಮಾರ್ಗದರ್ಶನದ ಅಗತ್ಯವಿದೆ ಎಂದು ಶಾಂತ್ ರಾಜ್ ಅಭಿಪ್ರಾಯ ಪಟ್ಟರು.
ರೋಟರಿ ಕ್ಲಬ್ ಬಂಟ್ವಾಳ ಟೌನ್, ಸರ್ಕಾರಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಹಾಗೂ ದ.ಕ ಜಿಲ್ಲಾ ಅಂಧತ್ವ ನಿರ್ಮೂಲನಾ ಕಾರ್ಯಕ್ರಮದ ಅಂಗವಾಗಿ ದ.ಕ ಜಿಲ್ಲಾ ಪಂಚಾಯಿತ್ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಮಾಣಿ ಯಲ್ಲಿ ವಿಧ್ಯಾರ್ಥಿಗಳಿಗೆ ದೃಷ್ಟಿ ತಪಾಸಣೆ ಶಿಬಿರದ ಸಭೆಯಲ್ಲಿ ಮಾತನಾಡಿದರು. ಸರ್ಕಾರದ ವಿವಿಧ ಸೇವೆಗಳನ್ನು ಒದಗಿಸುವ ಕೆಲಸಕ್ಕೆ ರೋಟರಿ ಟೌನ್ ನಂತಹ ಸಂಸ್ಥೆಗಳು ಮುಂದೆ ಬರುತ್ತಿರುವುದು ಪ್ರಶಂಸನೀಯ ಎಂದು ಹೇಳಿದರು. ಸಮಾರಂಭದ ಅಧ್ಯಕ್ಷತೆ ಯನ್ನು ರೋಟರಿ ಕ್ಲಬ್ ಬಂಟ್ವಾಳ ಟೌನ್ ಇದರ ನಿಯೋಜಿತ ಅಧ್ಯಕ್ಷ ರಾದ ಉಮೇಶ್ ನಿರ್ಮಲ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶಿಕ್ಷಣ ಇಲಾಖೆಯ ಸಮೂಹ ಸಂಪನ್ಮೂಲ ವ್ಯಕ್ತಿ ಸತೀಶ್ ಆಗಮಿಸಿದ್ದರು . ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಶಾರದಾ. ಕೆ ಅತಿಥಿಗಳನ್ನು ಸ್ವಾಗತಿಸಿದರು.ಸಹಶಿಕ್ಷಕಿ ಶೀಲಾವತಿ ಯನ್ ಧನ್ಯವಾದ ಸಮರ್ಪಣೆ ಮಾಡಿದರು.ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಗೆ ದೃಷ್ಟಿ ದೋಷ ತಪಾಸಣೆ ಯನ್ನು ಕಣ್ಣಿ ತಜ್ಞರಾದ ಶಾಂತ್ ರಾಜ್ ನಡೆಸಿದರು.