ಬಂಟ್ವಾಳ ರೋಟರಿ ಕ್ಲಬ್ ಪದಗ್ರಹಣ

ಜಾಹೀರಾತು

ಸುವರ್ಣ ವರ್ಷಾಚರಣೆಯ ಸಂಭ್ರಮದಲ್ಲಿರುವ ಬಂಟ್ವಾಳ ರೋಟರಿ ಕ್ಲಬ್ ಇದರ ನೂತನ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಶುಕ್ರವಾರ ಬಿ.ಸಿ.ರೋಡಿನ ರೋಟರಿ ಬಿ.ಎ. ಸೋಮಾಯಾಜಿ ಮೆಮೊರಿಯಲ್ ಹಾಲ್‌ನಲ್ಲಿ ನಡೆಯಿತು.

ನೂತನ ಸಾಲಿನ ಅಧ್ಯಕ್ಷರಾಗಿ ಮಂಜುನಾಥ ಆಚಾರ್ಯ ನಿರ್ಗಮನ ಅಧ್ಯಕ್ಷ ಬಿ.ಸಂಜೀವ ಪೂಜಾರಿಯವರಿಂದ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭ ಮಾತನಾಡಿದ ಅವರು ರೋಟರಿ ಕ್ಲಬ್‌ನ ಕಾರ್ಯಕ್ರಮಗಳು ಅವಿಸ್ಮರಣೀಯಗೊಳಿಸಲು ಎಲ್ಲಾ ಸದಸ್ಯರ ಸಹಕಾರ ಅಗತ್ಯ. ಮುಂದಿನ ದಿನಗಳಲ್ಲಿ ಎಲ್ಲರೂ ಸೇರಿಕೊಂಡು ಅತ್ಯುತ್ತಮ ಯೋಜನೆಗಳನ್ನು ಅನಷ್ಠಾನಗೊಳಿಸುವ ಜೊತೆಗೆ ಸುವರ್ಣ ವರ್ಷಾಚರಣೆಯನ್ನು ಯಶಸ್ವಿಗೊಳಿಸೋಣ ಎಂದರು.

ಮಂಗಳೂರು ಗಣೇಶ್ ಬೀಡಿಯ ಆಡಳಿತ ಪಾಲುದಾರ ಜಗನ್ನಾಥ ಶೆಣೈ ಸುವರ್ಣ ವರ್ಷಾಚರಣೆಯನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಅವರು ಮಾತನಾಡಿ ಜನರಿಗೆ ಅನುಕೂಲವಾಗುವಂತಹ ಕಾರ್ಯಕ್ರಮಗಳನ್ನು ಬಂಟ್ವಾಳ ರೋಟರಿ ಕ್ಲಬ್ ಆಯೋಜಿಸುತ್ತಿರುವುದು ಅಭಿನಂದನೀಯ ಎಂದರು.

ಜಾಹೀರಾತು

ಚುನಾಯಿತ ಜಿಲ್ಲಾ ಗವರ್ನರ್ ಅಭಿನಂದನ್ ಶೆಟ್ಟಿ ನೂತನ ಪದಾಧಿಕಾರಿಗಳಿಗೆ ಪದಗ್ರಹಣ ನೆರೆವೇರಿಸಿದರು. ವಲಯ ೪ರ ಸಹಾಯಕ ಗವರ್ನರ್ ಪ್ರಕಾಶ್ ಕಾರಂತ್ ಕ್ಲಬ್ ಬುಲೆಟಿನ್ ಗೋಲ್ಡನ್‌ರೋಟ್‌ವಾಲ್‌ನ್ನು ಬಿಡುಗಡೆ ಮಾಡಿದರು. ವಲಯ ಲೆಫ್ಟಿನೆಂಟ್ ಬಿ.ಸಂಜೀವ ಪೂಜಾರಿ, ನಿಕಟಪೂರ್ವ ಅಧ್ಯಕ್ಷ ರಿತೇಶ್ ಬಾಳಿಗ, ನಿರ್ಗಮನ ಕಾರ್ಯದರ್ಶಿ ನಾರಾಯಣ ಹೆಗ್ಡೆ ವೇದಿಕೆಯಲ್ಲಿದ್ದರು. ನಿರ್ಗಮನ ಅಧ್ಯಕ್ಷ ಸಂಜೀವ ಪೂಜಾರಿ ಸ್ವಾಗತಿಸಿದರು. ನೂತನ ಕಾರ್ಯದರ್ಶಿ ಶಿವಾನಿ ಬಾಳಿಗ ವಂದಿಸಿದರು. ಅಹಮ್ಮದ್ ಮುಸ್ತಾಫ ಕಾರ್ಯಕ್ರಮ ನಿರೂಪಿಸಿದರು.

ಪ್ರತಿಭಾನ್ವಿತ ಕಲಾವಿದೆ ಶಬರಿ ಗಾಣಿಗ ಅವರ ಲೈವ್ ಆರ್ಟ್ ಸಭಾಂಗಣದಲ್ಲಿ ನೆರೆದವರ ಗಮನ ಸೆಳೆಯಿತು. ಸುವರ್ಣ ವರ್ಷಚರಣೆಯ ಉದ್ಘಾಟನೆಯ ಸಂದರ್ಭ ರೋಟರಿ ಸಂಸ್ಥೆಯ ಸಂಸ್ಥಾಪಕ ಪೌಲ್ ಹ್ಯಾರೀಸ್ ಅವರ ಭಾವಚಿತ್ರವನ್ನು ಕ್ಷಣ ಮಾತ್ರದಲ್ಲಿ ಬಿಡಿಸುವ ಮೂಲಕ ಮೆಚ್ಚುಗೆಗೆ ಪಾತ್ರರಾದರರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು

About the Author

Bantwal News
2016 ನವೆಂಬರ್ 10ರಂದು ಆರಂಭಗೊಂಡ ಬಂಟ್ವಾಳದ ಮೊದಲ ವೆಬ್ ಪತ್ರಿಕೆ ಇದು. 25 ಲಕ್ಷಕ್ಕಿಂತಲೂ ಅಧಿಕ ಮಂದಿ ಕೇವಲ 45 ತಿಂಗಳಲ್ಲೇ ಓದಿದ ಜಾಲತಾಣವಿದು. ಸಂಪಾದಕ: ಹರೀಶ ಮಾಂಬಾಡಿ. ಬ್ರೇಕಿಂಗ್ ನ್ಯೂಸ್ ಧಾವಂತದಲ್ಲಿ ಅವಸರದ ಸುದ್ದಿ ಕೊಡದೆ, ಮಾಹಿತಿ ಖಚಿತಗೊಂಡ ಬಳಿಕವಷ್ಟೇ ಪ್ರಕಟಿಸಲಾಗುತ್ತದೆ. ಅತಿರಂಜಿತ ಸುದ್ದಿ ಇಲ್ಲಿಲ್ಲ. ಇದು www.bantwalnews.com ಧ್ಯೇಯ.

Be the first to comment on "ಬಂಟ್ವಾಳ ರೋಟರಿ ಕ್ಲಬ್ ಪದಗ್ರಹಣ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*