ಬಂಟ್ವಾಳ ತಾಲೂಕಿನ ಸರಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಲ್ಲಿಪಾದೆ, ಉಜಿರಾಡಿ ಕ್ವಾಟ್ರಸ್ನಲ್ಲಿ ಗುಡಿಸಲಲ್ಲಿ ವಾಸಿಸುತ್ತಿರುವ ಬಡ ಕುಟುಂಬವೊಂದಕ್ಕೆ ತುಳುನಾಡ ಪೊರ್ಲು ಸೇವಾ ಟ್ರಸ್ಟ್ ಮೂಲಕ ದಾನಿಗಳ ನೆರವಿನಿಂದ ಮನೆಯನ್ನು ಒದಗಿಸಲಾಗಿದೆ.
ಏಳು ವರ್ಷಗಳಿಂದ ಸಂಜೀವ, ಸುನಂದಾ ದಂಪತಿ ನಾಲ್ಕು ಮಕ್ಕಳೊಂದಿಗೆ ಗುಡಿಸಲಲ್ಲಿ ವಾಸಿಸುವ ಕುರಿತು ಮಾಧ್ಯಮಗಳಲ್ಲಿ ವರದಿ ಪ್ರಕಟಗೊಂಡಿತ್ತು. ಮನೆಯನ್ನು ಗಣಹೋಮ ಮಾಡುವ ಮೂಲಕ ಸುನಂದ ಸಂಜೀವ ದಂಪತಿಗಳಿಗೆ ಹಸ್ತಾಂತರ ಮಾಡಲಾಯಿತು. ಈ ಸಂದರ್ಭದಲ್ಲಿ ಟ್ರಸ್ಟ್ ನ ಪದಾಧಿಕಾರಿಗಳು, ಸದಸ್ಯರು ಹಾಗೂ ಊರ ನಾಗರಿಕರು ಉಪಸ್ಥಿತರಿದ್ದರು.
| ಪುರಸಭಾ ವ್ಯಾಪ್ತಿಯ ಜನರಲ್ಲಿ ಸಹಕಾರಕ್ಕೆ ಪ್ರಾಜೆಕ್ಟ್ ಡೈರೆಕ್ಟರ್ ಸಂತೋಷ್ ಕುಮಾರ್ ಮನವಿ | ನೀರು ಶುದ್ಧೀಕರಣ ಘಟಕಕ್ಕೆ ಭೇಟಿ,…