ಬಂಟ್ವಾಳ

ಬಿಆರ್ ಎಂಪಿ ಶಾಲೆಯಲ್ಲಿ ವನಮಹೋತ್ಸವ


ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್,ಬುಲ್ಬುಲ್ಸ್ ಮತ್ತು ಕಬ್ಸ್ ಮಕ್ಕಳು ತಮ್ಮ ಶಿಕ್ಷಕರ ಮಾರ್ಗದರ್ಶನದಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಟ್ಟು ವನಮಹೋತ್ಸವವನ್ನು ಆಚರಿಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಪರಿಸರವಾದಿ ದಿನೇಶ್ ನಾಯಕ್, ಅನೇಕ ಜಾತಿಯ ಸಸ್ಯಗಳ ಪರಿಚಯ ನೀಡಿದುದಲ್ಲದೆ ಅದರ ಉಪಯೋಗವನ್ನು ವಿವರಿಸಿದರು. ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳು ಪರಿಸರ ಸಂಬಂಧಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸಿ, ಮರಗಿಡಗಳ ಮಹತ್ವವನ್ನು ಮನದಟ್ಟು ಮಾಡಿದರು. ಶಾಲಾ ಪ್ರಿನ್ಸಿಪಾಲ್ ರಮಾ ಶಂಕರ್ ಮತ್ತು ಶಿಕ್ಷಕವೃಂದ ಈ ಸಂದರ್ಭ ಹಾಜರಿದ್ದರು.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts