ಕೊನೆಗೂ ಬಿ.ಸಿ.ರೋಡ್ ಹೃದಯಭಾಗದಲ್ಲಿರುವ ಹೆದ್ದಾರಿಯ ಹೊಂಡದ ಸಮಸ್ಯೆಗೆ ತಾತ್ಕಾಲಿಕ ಮುಕ್ತಿ ದೊರಕಿದೆ. ಬಿ.ಸಿ.ರೋಡ್ ಕೈಕಂಬದವರೆಗೂ ಹೆದ್ದಾರಿ ಸಂಪೂರ್ಣ ಹದಗೆಟ್ಟಿದ್ದು, ಅಲ್ಲಲ್ಲಿ ಹೊಂಡಗಳು ಎದ್ದು ಸಂಚಾರಕ್ಕೆ ತೊಂದರೆ ಉಂಟಾಗಿತ್ತು. ಹೆದ್ದಾರಿಯಲ್ಲಿ ಹೊಂಡದಿಂದ ಟ್ರಾಫಿಕ್ ಸಮಸ್ಯೆ ಉಂಟಾಗುವುದರ ಕುರಿತು ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆ ಎಸ್.ಐ. ಯಲ್ಲಪ್ಪ ಅವರು ಈ ಕುರಿತು ರಾಷ್ಟ್ರೀಯ ಹೆದ್ದಾರಿ ಇಲಾಖೆಗೆ ಲಿಖಿತ ರೂಪದಲ್ಲಿ ನೀಡಿದ ಮನವಿಗೆ ಇಲಾಖೆ ಸ್ಪಂದಿಸಿದ್ದು, ದೊಡ್ಡ ಗುಂಡಿಗಳಿಗೆ ಸಿಮೆಂಟ್ ಮತ್ತು ಜಲ್ಲಿಗಳನ್ನು ಹಾಕಿ ಮುಚ್ಚಲಾಯಿತು. ಸಣ್ಣ ಗುಂಡಿಗಳಿಗೆ ಮಂಗಳವಾರ ಮರಳು ಮಿಶ್ರಿತ ಜಲ್ಲಿ ಹಾಕಲಾಯಿತು. ಟ್ರಾಪಿಕ್ ಎಸ್.ಐ ಯಲ್ಲಪ್ಪ, ಎಎಸ್ಸೈ ಬಾಲಕೃಷ್ಣ ಮೊದಲಾದವರು ಈ ಸಂದರ್ಭ ಉಪಸ್ಥಿತರಿದ್ದು, ಸಮಸ್ಯೆಗಳ ಕುರಿತು ಮನವರಿಕೆ ಮಾಡಿದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಬಿ.ಸಿ.ರೋಡ್ ಹೃದಯಭಾಗದ ರಸ್ತೆ ಸಮಸ್ಯೆಗೆ ತಾತ್ಕಾಲಿಕ ಮುಕ್ತಿ"
Be the first to comment on "ಬಿ.ಸಿ.ರೋಡ್ ಹೃದಯಭಾಗದ ರಸ್ತೆ ಸಮಸ್ಯೆಗೆ ತಾತ್ಕಾಲಿಕ ಮುಕ್ತಿ"