ಬಂಟ್ವಾಳ ರೋಟರಿ ಕ್ಲಬ್ ವತಿಯಿಂದ ವಿವಿಧ ಶಾಲೆಗಳಲ್ಲಿನ ರೋಟರಿ ಇಂಟರಾಕ್ಟ್ ಕ್ಲಬ್‌ಗಳ ಪದಗ್ರಹಣ ಕಾರ್ಯಕ್ರಮ ರೋಟರಿ ಕ್ಲಬ್‌ನ ಸಭಾಭವನದಲ್ಲಿ ನಡೆಯಿತು. ಬಂಟ್ವಾಳ ರೋಟರಿ ಕ್ಲಬ್ ಸುವರ್ಣ ವರ್ಷಾಚರಣೆಯ ಸಂಭ್ರಮದಲ್ಲಿರುವುದರಿಂದ ಈ ಬಾರಿ ರೋಟರಾಕ್ಟ್ ಕ್ಲಬ್‌ಗಳ ಪದಗ್ರಹಣ ಕಾರ್ಯಕ್ರಮವನ್ನು ಒಂದೇ ಕಡೆ ವಿನೂತನ ರೀತಿಯಲ್ಲಿ ನಡೆಸಲಾಯಿತು.
ಪೊಳಲಿ ಸರಕಾರಿ ಪ್ರೌಢಶಾಲೆಯ ನೂತನ ಇಂಟರಾಕ್ಟ್ ಕ್ಲಬ್ ರಚಿಸಲಾಯಿತು. ಸರಕಾರಿ ಪ್ರೌಢಶಾಲೆ ಸಿದ್ದಕಟ್ಟೆ, ಮಣಿನಾಲ್ಕೂರು, ಕೊಲ, ಬೆಂಜನಪದವು, ಕಡೇಶಿವಾಲಯ, ಮಾಣಿ, ಪೆರ್ನೆ, ಶ್ರೀಶಾರದ ಪ್ರೌಢಶಾಲೆ ಪಾಣೆಮಂಗಳೂರು, ಎಸ್‌ಎಲ್‌ಎನ್‌ಪಿ ಆಂಗ್ಲಮಾಧ್ಯಮ ಪ್ರೌಢಶಾಲೆ ಪಾಣೆಮಂಗಳೂರು ಇಲ್ಲಿನ ಇಂಟರಾಕ್ಟ್ ಕ್ಲಬ್‌ನ ಪದಾಧಿಕಾರಿಗಳಿಗೆ ಪ್ರಮಾಣ ವಚನ ಭೋದಿಸಲಾಯಿತು.
ಇದೇ ಸಂದರ್ಭ ಇಂಟರಾಕ್ಟ್ ಕ್ಲಬ್‌ನ ಸಂಯೋಜಕರಾದ ಶ್ರೀಶಾರಾದ ಪ್ರೌಢಶಾಲೆಯ ಭೋಜ ಹಾಗೂ ಕೊಲ ಸರಕಾರಿ ಪ್ರೌಢಶಾಲೆಯ ರವಿಚಂದ್ರ ಮಯ್ಯ ಅವರನ್ನು ಸನ್ಮಾನಿಸಲಾಯಿತು. ತಾಲೂಕಿನ ವಿವಿಧ ಶಾಲೆಗಳಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯೂಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಜಿಲ್ಲಾ ಇಂಟರಾಕ್ಟ್ ಅಧ್ಯಕ್ಷ ಸುರೇಶ್ ಕಾರ್ಯಕ್ರಮ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿ ಕಿರಣ್ ಹೆಗ್ಡೆ, ಬಂಟ್ವಾಳ ರೋಟರಿ ಕ್ಲಬ್ ಅಧ್ಯಕ್ಷ ಮಂಜುನಾಥ ಆಚಾರ್ಯ, ಕಾರ್ಯದರ್ಶಿ ಶಿವಾನಿ ಬಾಳಿಗ, ವಲಯ ೪ರ ಸಹಾಯಕ ಗವರ್ನರ್ ಪ್ರಕಾಶ್ ಕಾರಂತ್ ಮತ್ತಿತರರು ಉಪಸ್ಥಿತರಿದ್ದರು.