ಬಂಟ್ವಾಳ

ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಸುಧಾಕರ ಆಚಾರ್ಯ


ಲಯನ್ಸ್ ಕ್ಲಬ್ ಬಂಟ್ವಾಳದ ೪೬ನೇ ನೂತನ ಅಧ್ಯಕ್ಷರಾಗಿ ಉದ್ಯಮಿ ಸುಧಾಕರ ಆಚಾರ್ಯರವರು ಆಯ್ಕೆಯಾಗಿರುತ್ತಾರೆ. ಉಪಾಧ್ಯಕ್ಷರಾಗಿ ಕೆ. ಸೇಸಪ್ಪ ಕೋಟ್ಯಾನ್, ಶ್ರೀನಿವಾಸ ಪೂಜಾರಿ ಮೆಲ್ಕಾರ್, ಉಮೇಶ್ ಆಚಾರ್ಯ ಸಂಚಯಗಿರಿ ಇವರುಗಳು ಆಯ್ಕೆಯಾದರು. 8ರಂದು ನಡೆಯುವ ಕಾರ್ಯಕ್ರಮದಲ್ಲಿ ಪದಗ್ರಹಣ ನೆರವೇರಲಿದೆ.
೨೦೧೮-೧೯ನೇ ಸಾಲಿಗೆ ಕಾರ್ಯದರ್ಶಿಯಾಗಿ ಎಲ್ಲೈಸಿಯ ಅಧಿಕಾರಿ ರಾಮಯ್ಯ ಶೆಟ್ಟಿ ಸಂಪಿಲ, ಕೋಶಾಧಿಕಾರಿಯಾಗಿ ಸಂದೀಪ್ ಕುಮಾರ್ ನಾಗನವಳಚ್ಚಿಲು ಜತೆ ಕಾರ್ಯದರ್ಶಿ ಸ್ವರ್ಣೋದ್ಯಮಿ ಸುನೀಲ್ ಬಿ., ಜತೆ ಕೋಶಾಧಿಕಾರಿಯಾಗಿ ಕೇಶವ ಆಚಾರ್ಯ ಹಾಗೂ ಐಪಿಪಿಯಾಗಿ ಜಗದೀಶ್ ಯಡಪಡಿತ್ತಾಯ, ಲಯನೆಸ್ ಅಧ್ಯಕ್ಷರಾಗಿ ಶರ್ಮಿಳಾ ಸುಧಾಕರ ಆಚಾರ್ಯ, ಕಾರ್ಯದರ್ಶಿ ದಿವ್ಯಾ ವಸಂತ ಶೆಟ್ಟಿ, ಕೋಶಾಧಿಕಾರಿ ಜಯಂತಿ ಮುಕುಂದ ಪ್ರಭು ಆಯ್ಕೆಯಾಗಿರುತ್ತಾರೆ.
ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ೮ರಂದು ಬಿ.ಸಿ.ರೋಡು ಲಯನ್ಸ್ ಸೇವಾ ಮಂದಿರದಲ್ಲಿ ನೆರವೇರಲಿದೆ. ಪದಗ್ರಹಣ ಅಧಿಕಾರಿಯಾಗಿ ಲಯನ್ಸ್ ಜಿಲ್ಲಾ ವೈಸ್ ಗವರ್ನರ್ ರೊನಾಲ್ಡ್ ಐ. ಗೋಮ್ಸ್‌ರವರು ಹಾಗೂ ಮುಖ್ಯ ಅತಿಥಿಯಾಗಿ ಬಂಟ್ವಾಳದ ಶಾಸಕರಾದ ರಾಜೇಶ್ ನಾಕ್ ಉಳಿಪಾಡಿಗುತ್ತು ಭಾಗವಹಿಸಲಿದ್ದಾರೆ.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts